ಕರ್ನಾಟಕ

karnataka

ETV Bharat / state

ಉಪ್ಪಿನಂಗಡಿ ಕಾಲೇಜ್​ಗೆ ಹಿಜಾಬ್ ಧರಿಸಿ‌ ಬಂದಲ್ಲಿ ಸೂಕ್ತ ಕ್ರಮ: ಸಂಜೀವ ಮಠಂದೂರು

ಹೈಕೋರ್ಟ್ ಮತ್ತು‌ ಕಾಲೇಜು‌ ಅಭಿವೃದ್ಧಿ ಸಮಿತಿಯ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನ ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು. ವಿದ್ಯಾರ್ಥಿನಿಯರಿಗೆ ಪಾಠ ಮುಖ್ಯವೋ, ಧಾರ್ಮಿಕತೆ ಮುಖ್ಯವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಸಂಜೀವ ಮಠಂದೂರು
ಸಂಜೀವ ಮಠಂದೂರು

By

Published : Jun 8, 2022, 2:19 PM IST

ಪುತ್ತೂರು: ಹಿಜಾಬ್ ಹೆಸರಿನಲ್ಲಿ ಮತೀಯ ಸಂಘಟನೆಗಳು ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿವೆ. ಹೈಕೋರ್ಟ್ ಮತ್ತು‌ ಕಾಲೇಜು‌ ಅಭಿವೃದ್ಧಿ ಸಮಿತಿ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಎಚ್ಚರಿಕೆ ನೀಡಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್ ಮತ್ತು‌ ಕಾಲೇಜು‌ ಅಭಿವೃದ್ಧಿ ಸಮಿತಿಯ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನ ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು. ವಿದ್ಯಾರ್ಥಿನಿಯರಿಗೆ ಪಾಠ ಮುಖ್ಯವೋ, ಧಾರ್ಮಿಕತೆ ಮುಖ್ಯವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದ ಅವರು ಧಾರ್ಮಿಕತೆ ಮುಖ್ಯವಾದಲ್ಲಿ ಕಾಲೇಜ್​ನಿಂದ ಹೊರ ನಡೆಯೋದು ಉತ್ತಮ. ಧಾರ್ಮಿಕತೆಗೆ ಅವಕಾಶ ಇರುವಲ್ಲಿ ಶಿಕ್ಷಣ ಪಡೆಯಲಿ ಎಂದರು.

ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂಜೀವ ಮಠಂದೂರು

ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಹಿಜಾಬ್ ಕುರಿತ ವಾಸ್ತವಿಕತೆ ಹೇಳಿದ್ದಾರೆ. ಓರ್ವ ಮುಸ್ಲಿಂ ಮುಖಂಡನ ಮಾತನ್ನು ವಿದ್ಯಾರ್ಥಿಗಳು ಒಪ್ಪಿಕೊಳ್ಳಬೇಕು. ವಿದ್ಯಾರ್ಥಿಗಳ ಬೇಜವಾಬ್ದಾರಿ ನಡೆಯನ್ನು ಸಹಿಸುವುದಿಲ್ಲ. ಸರ್ಕಾರಿ ಕಾಲೇಜು ಸರ್ವ ಧರ್ಮೀಯರಿಗೆ ಪಾಠ, ಪ್ರವಚನ ನೀಡುವ ಕೇಂದ್ರವಾಗಿದೆ. ಕೋರ್ಟ್ ಆದೇಶ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ಪ್ರತಿಭಟನೆಯಿಂದಾಗಿ ಇತರ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಜಿಲ್ಲಾಧಿಕಾರಿಗಳು ರಜೆ ಘೋಷಿಸಬೇಕಾ ಎಂದಾಗ ಬೇಡ ಎಂದಿದ್ದೇವೆ. ಕಾಲೇಜ್​ಗೆ ರಜೆ ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಾಠ, ಪ್ರವಚನಗಳಿಂದ ದೂರ ಉಳಿಯುವಂತಾಗುತ್ತದೆ. ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಲ್ಲಿ ಸೆಮಿಸ್ಟರ್ ಪರೀಕ್ಷೆ ಬರಲಿದೆ. ಈ ಕಾರಣಕ್ಕಾಗಿ ಕಾಲೇಜಿಗೆ ರಜೆ ಘೋಷಿಸಿಲ್ಲ. ತರಗತಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಹೇಳಿದರು.

ಕಾಲೇಜ್​ಗೆ ವರದಿ ಮಾಡಲು ತೆರಳಿದ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್​​ಐಆರ್ ದಾಖಲಾಗಿದೆ. ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಎಸ್.ಪಿ ಮತ್ತು ಡಿವೈಎಸ್​ಪಿಗೆ ಸೂಚಿಸಿದ್ದೇನೆ. ಪತ್ರಕರ್ತರು ಈಗಾಗಲೇ ಮನವಿ ಮತ್ತು ಪ್ರತಿಭಟನೆಯನ್ನೂ ಮಾಡಿದ್ದಾರೆ. ಗೃಹ ಸಚಿವರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಉಪ್ಪಿನಂಗಡಿ: ಹಿಜಾಬ್​ಗೆ ಪಟ್ಟು ಹಿಡಿದ 24 ವಿದ್ಯಾರ್ಥಿನಿಯರಿಗೆ 1 ವಾರದ ಕಾಲ ತರಗತಿಗೆ ನಿರ್ಬಂಧ

ABOUT THE AUTHOR

...view details