ಕರ್ನಾಟಕ

karnataka

ETV Bharat / state

ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು: ಪಾಲಿಕೆ ಸಭೆಯಲ್ಲಿ ಮತ್ತೆ ಪರ - ವಿರೋಧ - ಈಟಿವಿ ಭಾರತ ಕನ್ನಡ

ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ನಾಮಕರಣ ವಿಚಾರ ಗದ್ದಲಕ್ಕೆ ಕಾರಣವಾಗಿದೆ. ಕಳೆದ ತಿಂಗಳ ಸಭೆಯಲ್ಲಿ ಕಾಂಗ್ರೆಸ್​ ಸದಸ್ಯರಿಗೆ ತಿಳಿಯದಂತೆ ಅಂಗೀಕರಿಸಲಾಗಿದೆ ಎಂದು ಆರೋಪಿಸಲಾಗಿದೆ.

savarkar-is-named-after-suratkal-circle
ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು

By

Published : Oct 29, 2022, 1:15 PM IST

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಮಹಾನಗರ ಪಾಲಿಕೆಯ ಕಳೆದ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ನಾಮಕರಣದ ವಿಚಾರ ಅಂಗೀಕಾರ ಮಾಡಲಾಗಿತ್ತು. ಇದಕ್ಕೆ ಇದು ಕಾಂಗ್ರೆಸ್​ ಗಮನಕ್ಕೆ ಬಂದಿರಲಿಲ್ಲ. ಹೀಗಾಗಿ ಈ ತಿಂಗಳ ಮಾಸಿಕ ಸಭೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್​ ವಿರೋಧ ವ್ಯಕ್ತಪಡಿಸಿದೆ.

ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ನಾಮಕರಣಕ್ಕೆ ಕಾಂಗ್ರೆಸ್​ ವಿರೋಧ

ಇಂದು ಸಭೆ ಆರಂಭವಾಗುತ್ತಿದಂತೆ ಸದನದ ಬಾವಿಗಿಳಿದ ಕಾಂಗ್ರೆಸ್​ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸಾವರ್ಕರ್ ಧಿಕ್ಕಾರ ಹಾಕಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರು ಜೈಕಾರ ಹಾಕಿದ್ದಾರೆ. ಕೆಲಹೊತ್ತು ಪಾಲಿಕೆ ಸಭೆಯಲ್ಲಿ ಸಾವರ್ಕರ್ ಜೈಕಾರ - ಧಿಕ್ಕಾರ ಘೋಷಣೆಗಳು ಮೊಳಗಿದವು. ಆ ಬಳಿಕ ಪ್ರತಿಪಕ್ಷ ಮುಖಂಡರೊಂದಿಗೆ ಮೇಯರ್ ಮಾತುಕತೆ ನಡೆಸಿದರು.

ಇದನ್ನೂ ಓದಿ :ಮಂಗಳೂರು: 50 ಬೋಟ್​ಗಳ ಕಡಲಯಾನದಲ್ಲಿ ವಿಶೇಷವಾಗಿ ನಡೆಯಿತು ಕೋಟಿ ಕಂಠ ಗಾಯನ

ABOUT THE AUTHOR

...view details