ಕರ್ನಾಟಕ

karnataka

ETV Bharat / state

ಗುರುಪುರದಲ್ಲಿ ಸಾವರ್ಕರ್ ಭಾವಚಿತ್ರ ಪ್ರದರ್ಶನ, ಶಿಕ್ಷಣ ಸಂಸ್ಥೆಯಿಂದ ಕ್ಷಮಾಪಣೆ ಕೇಳಿಸಿದ ಎಸ್​ಡಿಪಿಐ

ಗುರುಪುರ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಮಕ್ಕಳು ಸಾವರ್ಕರ್​ ಭಾವಚಿತ್ರವನ್ನು ಪ್ರದರ್ಶಿಸಿದ್ದಕ್ಕೆ ಎಸ್​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

Savarkar portrait exhibition in Gurupura
ಗುರುಪುರದಲ್ಲಿ ಸಾವರ್ಕರ್ ಭಾವಚಿತ್ರ ಪ್ರದರ್ಶನ

By

Published : Aug 15, 2022, 9:27 PM IST

ಮಂಗಳೂರು: ಇಲ್ಲಿನ ಹೊರವಲಯದ ಗುರುಪುರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಾವರ್ಕರ್ ಭಾವಚಿತ್ರ ಪ್ರದರ್ಶನ ಮಾಡಿರುವುದು ಗೊಂದಲ ಸೃಷ್ಟಿಸಿತು. ಗುರುಪುರ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಘಟನೆ ನಡೆದಿದೆ.

ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ಎಸ್​ಡಿಪಿಐ ಆಕ್ಷೇಪ

ಗುರುಪುರದ ಬೆಥಣಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ್ದರು. ಮಕ್ಕಳು ಭಾರತಾಂಬೆಯ ಭಾವಚಿತ್ರದೊಳಗೆ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಳಸಿದ್ದು, ಅದರಲ್ಲಿ ಸಾವರ್ಕರ್ ಅವರ ಫೋಟೋ ಕೂಡಾ ಇತ್ತು.

ಇದಕ್ಕೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್​ಡಿಪಿಐ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಶಿಕ್ಷಣ ಸಂಸ್ಥೆಯಿಂದ ಕ್ಷಮಾಪಣೆ ಕೇಳಿಸಿದ್ದಾರೆ. ಈ ವಿಚಾರ ಕಾರ್ಯಕ್ರಮ ಮುಗಿದ ಬಳಿಕ ಹಿಂದೂ ಸಂಘಟನೆಗಳ ಕಾರ್ಯಕರ್ತರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಬಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಎಸ್​ಡಿಪಿಐ ಆಕ್ಷೇಪದ ಬಳಿಕ ಸುರತ್ಕಲ್ ಜಂಕ್ಷನ್‌ನಲ್ಲಿದ್ದ ಸಾವರ್ಕರ್ ಫೋಟೋ ತೆರವು

ABOUT THE AUTHOR

...view details