ಬಂಟ್ವಾಳ (ದಕ್ಷಿಣ ಕನ್ನಡ): ಸುದೀರ್ಘ 10 ತಿಂಗಳ ಬಳಿಕ ಹಲವು ಮುನ್ನೆಚ್ಚರಿಕೆಗಳೊಂದಿಗೆ ಬಂಟ್ವಾಳದಲ್ಲಿ ಶಾಲೆಗಳು ಮತ್ತೆ ಆರಂಭಗೊಂಡಿವೆ. ಈ ಹಿನ್ನೆಲೆ ವಿದ್ಯಾರ್ಥಿಗಳು ಸಾಮಾಜಿಕ ಅಂತರದೊಂದಿಗೆ ತರಗತಿಯಲ್ಲಿ ಕುಳಿತುಕೊಂಡು ಪಾಠ ಕೇಳಲು ವ್ಯವಸ್ಥೆ ಕಲ್ಪಿಸಲಾಗಿತ್ತು.
ಬಂಟ್ವಾಳದಲ್ಲಿ ಶಾಲೆಗಳು ಆರಂಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕೊಯಿಲ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ನೀಡಿ, ಸ್ವಾಗತಿಸಿ ಪೋಷಕರ ಸಭೆಯಲ್ಲಿ ಭಾಗವಹಿಸಿದರು.
ಓದಿ:ಶಾಲಾವರಣದ ಕಳೆ ಹೆಚ್ಚಿಸಿದ SSLC,PUC ವಿದ್ಯಾರ್ಥಿಗಳ ಕಲರವ
ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಶಾಲೆಗಳು ಸುಮಾರು 10 ತಿಂಗಳ ಬಳಿಕ ತೆರೆದಿದ್ದು, ವಿದ್ಯಾರ್ಥಿಗಳು ಮುಂಜಾಗ್ರತಾ ಕ್ರಮ ಅನುಸರಿಸಿ ತರಗತಿಗೆ ಬಂದು ಶೈಕ್ಷಣಿಕ ವರ್ಷದ ಸದುಪಯೋಗ ಪಡೆಯಬೇಕು.
ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಭಯಭೀತರಾಗದೆ, ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆಗಳನ್ನು ಪಾಲಿಸಿ ವಿದ್ಯಾರ್ಜನೆಗೆ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಶಿಕ್ಷಕರಿಗೆ ಈ ಬಾರಿ ತಮ್ಮ ಜವಾಬ್ದಾರಿ ಇನ್ನೂ ಹೆಚ್ಚಿದ್ದು, ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಅವರ ಆರೋಗ್ಯದ ಬಗ್ಗೆಯು ಗಮನ ಹರಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.