ಕರ್ನಾಟಕ

karnataka

ETV Bharat / state

ಎಸ್​ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಂದ ಕೋವಿಡ್ ಐಸೋಲೇಷನ್ ಸೆಂಟರ್‌ ನೀಡುವ ಭರವಸೆ

ಎಸ್​ಡಿಸಿಸಿ ಬ್ಯಾಂಕ್ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜಂಟಿಯಾಗಿ ಈ ಆಸ್ಪತ್ರೆಯ ನಿರ್ವಹಣೆ ಮಾಡಲಿವೆ. ಶಾಸಕ ವೇದವ್ಯಾಸ್ ಕಾಮತ್ ಅವರ ಬೇಡಿಕೆಗೆ ಸ್ಪಂದಿಸಿದ ಡಾ. ರಾಜೇಂದ್ರ ಕುಮಾರ್ ಆಸ್ಪತ್ರೆಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ.

Covid centre
Covid centre

By

Published : May 3, 2021, 7:28 PM IST

ಮಂಗಳೂರು: ನಗರದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎಸ್​ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಅವರು ಐಸೋಲೇಷನ್ ಸೆಂಟರ್ ಹಾಗೂ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಭರವಸೆ ನೀಡಿದ್ದಾರೆ.

ನಗರದ ಹೃದಯಭಾಗದಲ್ಲಿ ಐಸೋಲೇಷನ್ ಸೆಂಟರ್ ತೆರೆದು ಅಗತ್ಯವಿರುವ ಕೋವಿಡ್ ಸೋಂಕಿತರ ಸೇವೆಗಾಗಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ಬೇಕಾದ ಉಪಕರಣ ಹಾಗೂ ನಿರ್ವಹಣೆಯ ಕುರಿತು ಚರ್ಚೆ ನಡೆಯಿತು. ಎಸ್​ಡಿಸಿಸಿ ಬ್ಯಾಂಕ್ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜಂಟಿಯಾಗಿ ಈ ಆಸ್ಪತ್ರೆಯ ನಿರ್ವಹಣೆ ಮಾಡಲಿವೆ. ಶಾಸಕ ವೇದವ್ಯಾಸ್ ಕಾಮತ್ ಅವರ ಬೇಡಿಕೆಗೆ ಸ್ಪಂದಿಸಿದ ಡಾ. ರಾಜೇಂದ್ರ ಕುಮಾರ್ ಆಸ್ಪತ್ರೆಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ.

ಸಭೆಯಲ್ಲಿ ಮಂಗಳೂರು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಮುಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ್ ಕುಮಾರ ಶೆಟ್ಟಿ ಮತ್ತಿತರರು ಇದ್ದರು.

ABOUT THE AUTHOR

...view details