ಕರ್ನಾಟಕ

karnataka

ETV Bharat / state

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣಕ್ಕೆ ಎಸ್​ಡಿಪಿಐ ಒತ್ತಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಶೀಘ್ರವೇ ಡಾಂಬರೀಕರಣಗೊಳಿಸಬೇಕು. ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಬೇಕೆಂದು ಎಸ್​ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ.

Pressmeet
Pressmeet

By

Published : Oct 4, 2020, 4:32 PM IST

ಬಂಟ್ವಾಳ :ಸಂಚಾರಕ್ಕೆ ಯೋಗ್ಯವಲ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ತೇಪೆ ಹಾಕುವುದನ್ನು ಬಿಟ್ಟು ಡಾಂಬರೀಕರಣಗೊಳಿಸಿ ಸುಸ್ಥಿತಿಗೆ ತರಬೇಕು. ಇಲ್ಲವೆ ಚತುಷ್ಪಥ ಹೆದ್ದಾರಿ ಕಾಮಗಾರಿಯನ್ನು ಪುನರಾರಂಭಿಸುವಂತೆ ಎಸ್​ಡಿಪಿಐ 20 ದಿನಗಳ ಗಡುವು ನೀಡಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್​ಡಿಪಿಐ ದ.ಕ. ಜಿಲ್ಲಾ ಪ್ರ.ಕಾರ್ಯದರ್ಶಿ ಸಾಹುಲ್ ಹಮೀದ್, ಕಳೆದ ತಿಂಗಳ 29 ರಂದು ಪಕ್ಷದ ವತಿಯಿಂದ ನಡೆಸಲಾದ ಪ್ರತಿಭಟನೆ ಹಿನ್ನೆಲೆಯಲ್ಲಿ ಇದೀಗ ಹೆದ್ದಾರಿಯಲ್ಲಿರುವ ಬೃಹತ್ ಗಾತ್ರದ ಗುಂಡಿಗೆ ತೇಪೆ ಹಾಕುವ ಕಾರ್ಯ ಆರಂಭಗೊಂಡಿದೆ. ಈ ರೀತಿ ತೇಪೆ ಹಾಕುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಳೆ ಸುರಿದರೆ ಮತ್ತೆ ಹೊಂಡಗಳು ಪ್ರತ್ಯಕ್ಷವಾಗುವ ಸಾಧ್ಯತೆ ಇದೆ. ಹಾಗಾಗಿ ಮಂಗಳೂರು-ಬೆಂಗಳೂರು ಹೆದ್ದಾರಿಯನ್ನು ಡಾಂಬರೀಕರಣಗೊಳಿಸಿ ಸುಸ್ಥಿತಿಗೆ ತರುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.

ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿ:

ರಾ.ಹೆ.75ರ ಹಾಸನ-ಸಕಲೇಶಪುರ ಹಾಗೂ ಗುಂಡ್ಯ-ಬಿ.ಸಿ.ರೋಡ್ ನಡುವಣ ಚತುಷ್ಪಥ ರಸ್ತೆ ಕಾಮಗಾರಿ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದು, ಹೆದ್ದಾರಿಯಲ್ಲಿರುವ ಹೊಂಡ, ಗುಂಡಿಯಿಂದ ವಾಹನ ಸಂಚಾರವೇ ದುಸ್ತರವಾಗಿದೆ. ಈಗಾಗಲೇ ಅಪಘಾತಗಳು ಸಂಭವಿಸಿ ಸಾವು, ನೋವು ಸಂಭವಿಸುತ್ತಿವೆ. ಆದರೂ ಯಾವುದೇ ರಾಜಕೀಯ ನಾಯಕರು ಈ ಬಗ್ಗೆ ಚಕಾರವೆತ್ತದಿರುವುದು ಜನಸಾಮಾನ್ಯರ ಕುರಿತು ಇವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಮುಂದಿನ 20 ದಿನದೊಳಗಾಗಿ ಹೆದ್ದಾರಿಯನ್ನು ಸಂಪೂರ್ಣ ಡಾಂಬರೀಕರಣಗೊಳಿಸಬೇಕು. ಇಲ್ಲವೇ ಸ್ಥಗಿತಗೊಂಡಿರುವ ಹೆದ್ದಾರಿ ಕಾಮಗಾರಿಯನ್ನು ಪುನರಾರಂಭಿಸಬೇಕು. ಇಲ್ಲದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಪುರಸಭಾ ಸದಸ್ಯ ಮೊನೀಶ್ ಆಲಿ, ಪ್ರಧಾನ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ಉಪಸ್ಥಿತರಿದ್ದರು.

ABOUT THE AUTHOR

...view details