ಬಂಟ್ವಾಳ:ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಸರ್ಕಾರದ ನೀತಿ ವಿರುದ್ಧ ಎಸ್.ಡಿ.ಪಿ.ಐ ನಿಂದ ಬಂಟ್ವಾಳದಲ್ಲಿ ಪ್ರತಿಭಟನೆ - Bhatvala latest news
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪ್ರತಿಭಟನೆ ನಡೆಯಿತು.
Protest
ಪ್ರತಿಭಟನೆ ಉದ್ದೇಶಿಸಿ ರಾಜ್ಯ ಸಮಿತಿ ಸದಸ್ಯ ರಿಯಾಜ್ ಫರಂಗಿಪೇಟೆ ಮಾತನಾಡಿ, ಕೊರೊನಾ ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು. ಕೊರೊನಾ ವಿಚಾರದಲ್ಲಿ ರಾಜಕೀಯ ಮಾಡೋದು ಶೋಭೆ ತರುವ ವಿಚಾರವಲ್ಲ ಎಂದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್. ಹೆಚ್, ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ, ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಉಬೈದ್ ಬಂಟ್ವಾಳ, ಸದಸ್ಯರಾದ ಸಲೀಂ ಅಲಾಡಿ, ರವೂಫ್ ಕಲಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.