ಕರ್ನಾಟಕ

karnataka

ETV Bharat / state

ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ - ಖಾಸಗಿ ಕೋ-ಆಪರೇಟಿವ್ ಬ್ಯಾಂಕ್

ಖಾಸಗಿ ಕಾಲೇಜೊಂದರ ದ್ವಿತೀಯ ಪಿಯ ವಿದ್ಯಾರ್ಥಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

By

Published : Aug 30, 2019, 3:14 AM IST

ಮಂಗಳೂರು:ಇಲ್ಲಿನ ಖಾಸಗಿ ಕಾಲೇಜೊಂದರ ದ್ವಿತೀಯ ಪಿಯ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳೂರಿನ ಉಳ್ಳಾಲ ಮಾಸ್ತಿಕಟ್ಟೆಯಲ್ಲಿಈ ಘಟನೆ ಜರುಗಿದ್ದು, ಪ್ರತೀಕ್ (18 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ತರಗತಿಗೆ ರಜೆ ಎಂದು ಪ್ರತೀಕ್ ಮನೆಯಲ್ಲಿಯೇ ಉಳಿದುಕೊಂಡಿದ್ದ ಎನ್ನಲಾಗಿದೆ.ಈತನ ತಂದೆ ಕಮಲಾಕ್ಷ ಹಾಗೂ ತಾಯಿ ಪದ್ಮಾಕ್ಷಿ ಕಂಕನಾಡಿಯ ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿಗಳಾಗಿದ್ದು, ಅವರು ಕೆಲಸಕ್ಕೆ ಹೋದ ನಂತರ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details