ಪುತ್ತೂರು: ಭೂ ಸುಧಾರಣಾ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾನೂನು ಅಗತ್ಯ ಸರಕುಗಳ ಕಾಯ್ದೆಗಳ ತಿದ್ದುಪಡಿ ಹಾಗೂ ವಿದ್ಯುತ್ ಖಾಸಗೀಕರಣ, ಮೇಲ್ಜಾತಿಯವರಿಗೆ 10% ಮೀಸಲಾತಿ ವಿಷಯಗಳ ಕುರಿತು ಸೆಪ್ಟಂಬರ್ 11ರಂದು ಜಿಲ್ಲಾ ಮಟ್ಟದ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು.
ಸೆ.11ರಂದು ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ವಿಚಾರ ಗೋಷ್ಠಿ
ಕೇಂದ್ರ ಸರ್ಕಾದ ಈಚೆಗಿನ ತಿದ್ದುಪಡಿ ಹಾಗೂ ಮೀಸಲಾತಿ ಕುರಿತಂತೆ ಸ.11ರಂದು ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು.
ಇಲ್ಲಿನ ಪಿ.ಸಿ ರಸ್ತೆಯ ರಂಗೋಲಿ ಸಭಾ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿಂತಕರು, ಪರ್ತಕರ್ತರಾದ ಶಿವ ಸುಂದರ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ವಿಚಾರ ಮಂಡಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಯಾದವ ಶೆಟ್ಟಿ, ಸಿ.ಐ.ಟಿ.ಯು ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಪ್ರೊ.ಬಿ.ಕೃಷ್ಣಪ್ಪ, ರಾಜ್ಯಸಂಘಟನಾ ಸಂಚಾಲಕ ಎಂ.ದೇವದಾಸ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಇದರ ರಾಜ್ಯಸಂಘಟನಾ ಸಂಚಾಲಕ ಚಂದು.ಎಲ್, ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆಯ ಜಿಲ್ಲಾಸಂಯೋಜಕ ವಿದ್ಯಾ ದಿನಕರ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದರು.