ಸುಳ್ಯ (ದಕ್ಷಿಣ ಕನ್ನಡ):ಜಿಲ್ಲೆಯ ಹಲವೆಡೆ ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಒಳಪ್ರವೇಶಕ್ಕೆ ಕೆಲವೊಂದು ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ.
ಕೊರೊನಾ ಎಫೆಕ್ಟ್: ದ.ಕ ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಕರಾವಳಿ ಭಾಗದ ಪೊಲೀಸ್ ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟ ಬಳಿಕ ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಅಲ್ಲದೆ ಕೋವಿಡ್ ಸೇವೆಯಲ್ಲಿದ್ದ ಪೊಲೀಸರು ಕೊರೊನಾ ಭೀತಿಗೆ ಒಳಗಾಗಿದ್ದರು. ಈ ಹಿನ್ನೆಲೆ ಜಿಲ್ಲೆಯ ಹಲವು ಠಾಣೆಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.
ಈ ಹಿನ್ನೆಲೆಯಲ್ಲಿ ಸುಳ್ಯ, ಕಡಬ, ಸುಬ್ರಹ್ಮಣ್ಯ, ಬೆಳ್ಳಾರೆ, ಉಪ್ಪಿನಂಗಡಿ, ನೆಲ್ಯಾಡಿ ಸೇರಿದಂತೆ ಎಲ್ಲಾ ಪೋಲಿಸ್ ಠಾಣೆಗಳಲ್ಲೂ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಮುನ್ನೆಚ್ಚರಿಕಾ ದೃಷ್ಟಿಯಿಂದ ಸಾರ್ವಜನಿಕರ ಒಳಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಆಯಾ ಠಾಣೆಗಳ ಎದುರಿನ ಜಗಲಿಯಲ್ಲಿ ದೂರು ದಾಖಲೆಗೆ ಅಗತ್ಯವಿರುವ ಒಂದು ಮೇಜನ್ನು ಇರಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿದೆ. ಇಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಾರೆ. ಇನ್ನು ಠಾಣೆಯ ಒಳಗೆ ಕರ್ತವ್ಯದಲ್ಲಿರುವವರು ಒಳಗಡೆಯೇ ಇರುತ್ತಾರೆ. ಇವರು ಸರದಿ ಪ್ರಕಾರ ಕರ್ತವ್ಯ ನಿರ್ವಹಿಸಲಿದ್ದಾರೆ.