ಮಂಗಳೂರು :ನಗರದಲ್ಲಿ ವ್ಯಕ್ತಿಯೋರ್ವನೊಂದಿಗೆ ಯುವತಿಯೋರ್ವಳು ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋಗಳು ವಾಟ್ಸ್‌ಆ್ಯಪ್ ಮೂಲಕ ಪ್ರಸಾರ ಆಗುತ್ತಿದ್ದು, ಈ ಬಗ್ಗೆ ಪೊಲೀಸರು ಸು-ಮೋಟು ಪ್ರಕರಣವನ್ನು ದಾಖಲಿಸಿಕೊಳ್ಳಲಿದ್ದಾರೆ ಎಂದು ದಕ್ಷಿಣಕನ್ನಡ ಜಿಲ್ಲಾ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಸಲೀಲೆ ವಿಡಿಯೋ ಪ್ರಕರಣ.. ವಿಡಿಯೋ ಶೇರ್, ಶೇಖರಣೆ ಮಾಡಿದರೆ ಕಾನೂನು ಕ್ರಮ.. - Kannada news paper
ಉಲ್ಲೇಖಿತ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದು. ಅಲ್ಲದೆ ಆ ವಿಡಿಯೋಗಳನ್ನು ಯಾರೂ ಫೋನ್ ಅಥವಾ ಕಂಪ್ಯೂಟರ್‌ಗಳಲ್ಲಿ ಶೇಖರಿಸಿಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ.ಕ.ಜಿಲ್ಲಾ ನಿರೀಕ್ಷಕ ಪ್ರಕಟಣೆ
ಉಲ್ಲೇಖಿತ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದು. ಅಲ್ಲದೆ ಆ ವಿಡಿಯೋಗಳನ್ನು ಯಾರೂ ಫೋನ್ ಅಥವಾ ಕಂಪ್ಯೂಟರ್‌ಗಳಲ್ಲಿ ಶೇಖರಿಸಿಡಬಾರದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಐಪಿಸಿಯ 354 ಸಿ ಮತ್ತು 66 ಇ, ಐಟಿ ಕಾಯ್ದೆಯ 66ಎ ಅಡಿಯಲ್ಲಿ, ಅಂತಹ ವ್ಯಕ್ತಿಗಳನ್ನು (ಗುಂಪು ನಿರ್ವಾಹಕರು ಸೇರಿದಂತೆ) ಅಪರಾಧಿಗಳೆಂದು ಪರಿಗಣಿಸಲಾಗುವುದು ಎಂದು ಖಡಕ್ ವಾರ್ನ್ ಮಾಡಿದ್ದಾರೆ.