ಪುತ್ತೂರು:ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಲೈಂಗಿಕ ಕಿರುಕುಳ: ಪುತ್ತೂರಿನ ದೈಹಿಕ ಶಿಕ್ಷಣ ನಿರ್ದೇಶಕನಿಗೆ ನ್ಯಾಯಾಂಗ ಬಂಧನ - ದೈಹಿಕ ಶಿಕ್ಷಕನಿಗೆ ನ್ಯಾಯಾಂಗ ಬಂಧನ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನ್ಯಾಯಾಂಗ ಬಂಧನ
ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರನ್ನು ಪುತ್ತೂರು ಮಹಿಳಾ ಪೊಲೀಸರು ಅ.25 ರಂದು ರಾತ್ರಿ ಬಂಧಿಸಿದ್ದರು.
ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.