ಮಂಗಳೂರು :ಕಳೆದ ವಾರ ಅಪ್ರಾಪ್ತೆ ಸೇರಿದಂತೆ ಇಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಸಾರ್ವಜನಿಕರೇ ಕಾದು ಕುಳಿತು ಪತ್ತೆ ಹಚ್ಚಿ ಪೊಲೀಸರಿಗೊಪ್ಪಿಸಿದ ಘಟನೆ ಇಂದು ನಡೆದಿದೆ.
ಮಂಜೇಶ್ವರ ಹೊಸಬೆಟ್ಟು ನಿವಾಸಿ ಮುಸ್ತಫಾ ಎಂಬಾತ ಬಂಧಿತ ಆರೋಪಿ. ಆರೋಪಿ ಮುಸ್ತಫಾ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ತಚ್ಚನಿ ಎಂಬಲ್ಲಿ ಒಂಟಿಯಾಗಿ ಬರುತ್ತಿದ್ದ ಬಾಲಕಿಯನ್ನ ಮುಟ್ಟಿ ಕಿರುಕುಳ ನೀಡಿ ಪರಾರಿಯಾಗಿದ್ದ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.