ಕರ್ನಾಟಕ

karnataka

ETV Bharat / state

ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ವಿರುದ್ಧ ಪ್ರಕರಣ ದಾಖಲು - complaint lodge

ಆರೋಪಿ ನೌಫತ್​, ಬಾಲಕಿ ಶಾಲೆಗೆ ಹೋಗುವಾಗ ಪರಿಚಯ ಬೆಳೆಸಿಕೊಂಡಿದ್ದಾನೆ. ಬಳಿಕ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ, ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವೆ ಎಂದು ಬೆದರಿಕೆ ಹಾಕಿರುವುದು ತಿಳಿದುಬಂದಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ವಿರುದ್ಧ ಪ್ರಕರಣ ದಾಖಲು
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ವಿರುದ್ಧ ಪ್ರಕರಣ ದಾಖಲು

By

Published : Nov 3, 2021, 3:54 PM IST

Updated : Nov 3, 2021, 4:39 PM IST

ಬೆಳ್ತಂಗಡಿ:ಅನ್ಯಧರ್ಮೀಯ ಯುವಕನೋರ್ವ ಬಾಲಕಿಯನ್ನು ಬೆದರಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಬಾಲಕಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿವಾಸಿಯಾಗಿದ್ದು, ಹೊಸಮಜಲು ನಿವಾಸಿಯಾದ ಆಟೋ ಚಾಲಕ ನೌಫಲ್​ ದೌರ್ಜನ್ಯ ಎಸಗಿದ್ದಾನೆ. (ಪೊಕ್ಸೊ ಕಾಯ್ದೆಯನ್ವಯ ಸಂತ್ರಸ್ತ ಬಾಲಕಿಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತಿಲ್ಲ)

ಆರೋಪಿ ನೌಫತ್​, ಬಾಲಕಿ ಶಾಲೆಗೆ ಹೋಗುವಾಗ ಪರಿಚಯ ಬೆಳೆಸಿಕೊಂಡಿದ್ದ. ಆ ಬಳಿಕ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದೇ ವೇಳೆ ಬಂದು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ, ಬಾಲಕಿಯು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವೆ ಎಂದು ಬೆದರಿಕೆ ಹಾಕಿದ್ದಾನೆ.

ಇದರಿಂದ ಹೆದರಿದ್ದ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ. ಆದರೆ, ಆರೋಪಿ ನೌಫತ್​ ನ.2ರಂದು ಬಾಲಕಿಯನ್ನು ಲೈಂಗಿಕ ಸಂಪರ್ಕಕ್ಕೆ ಆಹ್ವಾನಿಸಿದ್ದಾನೆ. ಇದರಿಂದ ಬೇಸತ್ತ ಬಾಲಕಿ ತಂದೆ- ತಾಯಿಗೆ ವಿಚಾರ ತಿಳಿಸಿದ್ದಾಳೆ. ಬಳಿಕ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ. ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Last Updated : Nov 3, 2021, 4:39 PM IST

ABOUT THE AUTHOR

...view details