ಕರ್ನಾಟಕ

karnataka

ETV Bharat / state

4ರ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಆರೋಪಿ ವಿಘ್ನೇಶ್ ಭಂಡಾರಿಗೆ ಯಾವುದೇ ಉದ್ಯೋಗವಿಲ್ಲದೆ ತಿರುಗಾಡುತ್ತಿದ್ದ. ಈ ಹಿಂದೆಯೂ ಇಂತಹ ಕೃತ್ಯವೆಸಗಿದ್ದ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ. ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಉಪ ನಿರೀಕ್ಷಕ ಪವನ್ ನಾಯಕ್ ಮತ್ತು ತಂಡ ತನಿಖೆ ನಡೆಸುತ್ತಿದ್ದಾರೆ..

ಆರೋಪಿ ಬಂಧನ
ಆರೋಪಿ ಬಂಧನ

By

Published : Jun 8, 2021, 4:22 PM IST

ಬೆಳ್ತಂಗಡಿ (ದ.ಕ) :ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಕ್ಕಿಂಜೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ(22) ಬಂಧಿತ ಆರೋಪಿ. ಈತ ತನ್ನ ಮನೆ ಸಮೀಪದ ನಾಲ್ಕು ವರ್ಷದ ಬಾಲಕಿಯನ್ನು ಮನೆಗೆ ಕರೆದು ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಈ ಸಂಬಂಧ ಬಾಲಕಿಯ ಪೋಷಕರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಆರೋಪಿ ವಿಘ್ನೇಶ್ ಭಂಡಾರಿಗೆ ಯಾವುದೇ ಉದ್ಯೋಗವಿಲ್ಲದೆ ತಿರುಗಾಡುತ್ತಿದ್ದ. ಈ ಹಿಂದೆಯೂ ಇಂತಹ ಕೃತ್ಯವೆಸಗಿದ್ದ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ. ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಉಪ ನಿರೀಕ್ಷಕ ಪವನ್ ನಾಯಕ್ ಮತ್ತು ತಂಡ ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details