ಕರ್ನಾಟಕ

karnataka

ETV Bharat / state

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪೊಕ್ಸೊ ಕಾಯ್ದೆಯಡಿ ಆರೋಪಿ ಬಂಧನ - Sexual Hrrasment on Minor Girl in Bantwal

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಪುತ್ತೂರು ತಾಲೂಕು ಹಿರೆಬಂಡಾಡಿಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Sexual Hrrasment on Minor Girl in Dakshina Kannada
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ

By

Published : Dec 9, 2020, 4:35 PM IST

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣದಲ್ಲಿ ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ನಿವಾಸಿ, ಅಜಯ್ (21) ಎಂಬಾತನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆಯ ಸಖ್ಯ ಬೆಳೆಸಿದ್ದ ಆರೋಪಿ, ಲೈಂಗಿಕ ದೌರ್ಜನ್ಯ ಎಸಗಿದ್ದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ಹೆರಿಗೆ ನೋವಿನಿಂದ ನರಳುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ವಾಹನದಲ್ಲೇ ಹೆರಿಗೆಯಾಗಿ ಮಗು ಮೃತಪಟ್ಟಿತ್ತು.

ಓದಿ : ಅಪ್ರಾಪ್ತನಿಂದ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಸಾಗರದಲ್ಲಿ ಪೊಕ್ಸೊ ಪ್ರಕರಣ ದಾಖಲು

ಬಳಿಕ ಆಕೆಯನ್ನು ಆರೈಕೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ಮಾಹಿತಿ ಬಂದ ಮೇರೆಗೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿ ಅಜಯ್‌ನ​ನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಮುಂದಿನ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

For All Latest Updates

TAGGED:

ABOUT THE AUTHOR

...view details