ಉಳ್ಳಾಲ :ಕೊರೊನಾ ತಡೆ ನಿಟ್ಟಿನಲ್ಲಿ ಅಂತರ್‌ರಾಜ್ಯಗಳಿಂದ ಆಗಮಿಸಿದವರನ್ನು ಮಂಗಳೂರಿನ ಸರ್ಕಾರಿ ವಿದ್ಯಾರ್ಥಿ ನಿಲಯ ಮತ್ತು ಖಾಸಗಿ ಹೋಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈಗ ಅವರನ್ನೆಲ್ಲ ಹೋಮ್ ಕ್ವಾರಂಟೈನ್‌ಗೆ ತೆರಳಲು ಅವಕಾಶ ನೀಡಲಾಯ್ತು.
ಸರ್ಕಾರಿ ಕ್ವಾರಂಟೈನ್ನಲ್ಲಿದ್ದರು ಹೋಮ್ ಕ್ವಾರಂಟೈನ್‌ಗೆ ಶಿಫ್ಟ್!! - mangalore quarentain news
ಮಂಗಳೂರು ತಾಲೂಕಿಗೆ ಒಳಪಟ್ಟ ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಟಣ ಪಂಚಾಯತ್ ಸೇರಿ 10 ಗ್ರಾಮಗಳ ಒಟ್ಟು 40ಕ್ಕೂ ಹೆಚ್ಚು ಜನ ಕೇರಳ, ಗುಜರಾತ್, ತಮಿಳುನಾಡು ರಾಜ್ಯಗಳಿಂದ ಆಗಮಿಸಿದವರನ್ನು ಮನೆಗೆ ಕಳುಹಿಸಲಾಯಿತು.
ಸರ್ಕಾರಿ ಕ್ವಾರಂಟೈನ್ನಲ್ಲಿದ್ದವರನ್ನು ಹೋಮ್ ಕ್ವಾರಂಟೈನ್ ಶಿಫ್ಟ್
ಮಂಗಳೂರು ತಾಲೂಕಿಗೆ ಒಳಪಟ್ಟ ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಟಣ ಪಂಚಾಯತ್ ಸೇರಿ 10 ಗ್ರಾಮಗಳ ಒಟ್ಟು 40ಕ್ಕೂ ಹೆಚ್ಚು ಜನ ಕೇರಳ, ಗುಜರಾತ್, ತಮಿಳುನಾಡು ರಾಜ್ಯಗಳಿಂದ ಆಗಮಿಸಿದವರನ್ನು ಮನೆಗೆ ಕಳುಹಿಸಲಾಯಿತು. ಆಶಾ ಕಾರ್ಯಕರ್ತೆಯರು ಹೋಮ್ ಕ್ವಾರಂಟೈನ್ ಮೊಹರು ಹಾಕಿ ನಿಯಮಗಳನ್ನು ತಿಳಿಸಿ ಬೀಳ್ಕೊಟ್ಟರು.
ನೋಡೆಲ್ ಅಧಿಕಾತರಿ ನವೀನ್ ಹೆಗ್ಡೆ ಮಾತನಾಡಿ, ಜಿಲ್ಲಾ ಆರೋಗ್ಯ ಇಲಾಖೆಯ ಆದೇಶದಂತೆ ಕ್ವಾರಂಟೈನ್ ಪೂರ್ಣಗೊಳಿಸಿದವರನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಕ್ವಾರಂಟೈನ್ನಲ್ಲಿದ್ದ ಎಲ್ಲರನ್ನೂ ಬಿಡುಗಡೆ ಮಾಡಲಾಗಿದೆ ಎಂದರು.