ಮಂಗಳೂರು:ಕೊರೊನಾ ಸೋಂಕು ನಿಯಂತ್ರಿಸಲು ಗುರುವಾರದಿಂದ ಒಂದು ವಾರ ಕಾಲ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗುರುವಾರದಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ಡೌನ್: ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಬುಧವಾರದವರೆಗೆ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಬುಧವಾರ ರಾತ್ರಿ ಬಳಿಕ ಲಾಕ್ಡೌನ್ ಜಾರಿಯಾಗಲಿದೆ. ಅದರ ಮಾರ್ಗಸೂಚಿ ಹಾಗೂ ನಿಯಮಗಳನ್ನು ಆದಷ್ಟು ಶೀಘ್ರದಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಗೊಳಿಸಲಿದ್ದಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬುಧವಾರದವರೆಗೆ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಬುಧವಾರ ರಾತ್ರಿ ಬಳಿಕ ಲಾಕ್ಡೌನ್ ಜಾರಿಯಾಗಲಿದೆ. ಅದರ ಮಾರ್ಗಸೂಚಿ ಹಾಗೂ ನಿಯಮಗಳನ್ನು ಆದಷ್ಟು ಶೀಘ್ರದಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಗೊಳಿಸಲಿದ್ದಾರೆ ಎಂದು ತಿಳಿಸಿದರು.
ಲಾಕ್ಡೌನ್ನ ಅನಿವಾರ್ಯತೆ ಇದ್ದಲ್ಲಿ ಆಯಾ ಜಿಲ್ಲೆಯವರು ನಿರ್ಧಾರ ಕೈಗೊಳ್ಳಲು ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣ ಮಾಡುವಲ್ಲಿ ಲಾಕ್ಡೌನ್ ಅನಿವಾರ್ಯವಾಗಿದೆ. ಜನಪ್ರತಿನಿಧಿಗಳು ಮತ್ತು ಜನಸಾಮಾನ್ಯರ ಅಭಿಪ್ರಾಯದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.