ಕರ್ನಾಟಕ

karnataka

ETV Bharat / state

ಸಮಾಜಸೇವಕ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ನುಡಿನಮನ - ಅಹ್ಮದ್ ಹಾಜಿ ಮುಹಿಯುದ್ದೀನ್ ಅವರ ಶ್ರದ್ಧಾಂಜಲಿ

ಶೈಕ್ಷಣಿಕ, ವೈದ್ಯಕೀಯ ಕ್ಷೇತ್ರದ ಜೊತೆಗೆ ಸಮಾಜ ಸೇವೆಯ ಮೂಲಕ ಹೆಸರಾಗಿದ್ದ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

Shraddanjali for B. Ahmad Haji Muhiuddin
Shraddanjali for B. Ahmad Haji Muhiuddin

By

Published : Aug 22, 2020, 11:33 PM IST

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲದೇ ಕೊಲ್ಲಿ ರಾಷ್ಟ್ರದಲ್ಲೂ ಶೈಕ್ಷಣಿಕ, ವೈದ್ಯಕೀಯ ಕ್ಷೇತ್ರಗಳಲ್ಲಿನ ಸಾಧನೆ ಮೂಲಕ ಹೆಸರಾಗಿದ್ದ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ತಾಲೂಕಿನ ತುಂಬೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ನುಡಿನಮನ ಸಲ್ಲಿಸಿದ ತುಂಬೆ ಕಾಲೇಜಿನ ಸಂಚಾಲಕ, ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕಾಧ್ಯಕ್ಷ ಬಸ್ತಿ ವಾಮನ ಶೆಣೈ, ಮಾಜಿ ಸಚಿವ ಬಿ.ರಮಾನಾಥ ರೈ, ಯೆನೆಪೊಯ ಯುನಿವರ್ಸಿಟಿಯ ಚಾನ್ಸಲರ್ ಅಬ್ದುಲ್ಲಾ ಕುಂಞಿ, ಶಾಸಕ ಯು.ಟಿ. ಖಾದರ್ ಅವರು ಅಹ್ಮದ್ ಹಾಜಿ ಅವರ ಸಾಧನೆ ಸ್ಮರಿಸಿದರು.

ಅಹ್ಮದ್ ಹಾಜಿ ಅವರ ಪುತ್ರ ಸಲಾಂ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಎಸ್.ಡಿ.ಪಿ.ಐ. ಕರ್ನಾಟಕ ಅಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಅಹ್ಮದ್ ಹಾಜಿ ಅವರ ಪುತ್ರರಾದ ಗಲ್ಫ್ ಯುನಿವರ್ಸಿಟಿ ಸಂಸ್ಥಾಪಕ ತುಂಬೆ ಮೊಯ್ದಿನ್, ಬಿ.ಎಂ. ಅಶ್ರಫ್ ಉಪಸ್ಥಿತರಿದ್ದರು.

ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಂಬೆ ಶಾಲಾ ವಿದ್ಯಾರ್ಥಿ ಅಫ್ನಾನ್ ಕಿರಾಅತ್ ಪಠಿಸಿದರು. ಉಪನ್ಯಾಸಕ ದಿನೇಶ್ ಶೆಟ್ಟಿ ಧನ್ಯವಾದಗೈದರು. ಅಬ್ದುಲ್ ಕಬೀರ್ ಕಾರ್ಯಕ್ರಮ ನಿರೂಪಿಸಿದರು.

ABOUT THE AUTHOR

...view details