ಕರ್ನಾಟಕ

karnataka

ETV Bharat / state

ಕಂಬಳ, ಯಕ್ಷಗಾನ, ಭೂತಾರಾಧನೆ ಕರಾವಳಿ ಭಾಗದ ಜನಪದ ಕ್ರೀಡೆ : ಸಿದ್ದರಾಮಯ್ಯ - ಕೋಟಿ ಚೆನ್ನಯ ಜೋಡುಕರೆ ಕಂಬಳ

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯಾದ್ರೆ ಇಲ್ಲಿ ಕಂಬಳ ಹೆಚ್ಚು ಮಹತ್ವ ಪಡೆದಿದೆ. ಆದರೆ, ಜಲ್ಲಿಕಟ್ಟು ಕ್ರೀಡೆಯು ಅಪಾಯಕಾರಿಯಾಗಿದೆ. ಇದರಿಂದ ಹಲವು ಮಂದಿ ಸಾವಿಗೀಡಾಗುತ್ತಾರೆ. ಆದರೆ, ಕಂಬಳವು ಅಪಾಯಕಾರಿಯಲ್ಲದ ಕ್ರೀಡೆಯಾಗಿ ಬೆಳೆದಿದೆ ಎಂದರು..

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Mar 20, 2022, 12:40 PM IST

Updated : Mar 20, 2022, 1:05 PM IST

ಪುತ್ತೂರು: ಕಂಬಳ, ಯಕ್ಷಗಾನ ಮತ್ತು ಭೂತಾರಾಧನೆಯು ಕರಾವಳಿ ಭಾಗದ ಜನಪದ ಕ್ರೀಡೆಯಾಗಿದೆ. ಈ ಕ್ರೀಡೆಗಳು ಜನರ ನಡುವೆ ಬೆಳೆದು ಬಂದಿದೆ. ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಪ್ರೋತ್ಸಾಹ ಅಗತ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಮುಂಭಾಗದಲ್ಲಿರುವ ದೇವರ ಮಾರು ಗದ್ದೆಯಲ್ಲಿ ನಡೆಯುತ್ತಿರುವ 29ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂಬಳವು ರೋಮಾಂಚನಕಾರಿ ಕ್ರೀಡೆಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಪ್ರಿಯವಾಗಿದೆ ಎಂದರು.

ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದಲ್ಲಿ ಸಿದ್ದರಾಮಯ್ಯ ಭಾಗಿ

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯಾದ್ರೆ ಇಲ್ಲಿ ಕಂಬಳ ಹೆಚ್ಚು ಮಹತ್ವ ಪಡೆದಿದೆ. ಆದರೆ, ಜಲ್ಲಿಕಟ್ಟು ಕ್ರೀಡೆಯು ಅಪಾಯಕಾರಿಯಾಗಿದೆ. ಇದರಿಂದ ಹಲವು ಮಂದಿ ಸಾವಿಗೀಡಾಗುತ್ತಾರೆ. ಆದರೆ, ಕಂಬಳವು ಅಪಾಯಕಾರಿಯಲ್ಲದ ಕ್ರೀಡೆಯಾಗಿ ಬೆಳೆದಿದೆ ಎಂದರು.

ಐತಿಹಾಸಿಕ ವೀರಪುರುಷರಾದ ಕೋಟಿ-ಚೆನ್ನಯ್ಯರ ಹೆಸರಿನಲ್ಲಿ ಈ ಕ್ರೀಡೆ ನಡೆಯುತ್ತಿರುವುದು ಸಂತಸದ ವಿಚಾರ ಎಂದ ಅವರು, ಕೋಟಿ-ಚೆನ್ನಯ್ಯರ ಹುಟ್ಟೂರಿನ ಅಭಿವೃದ್ಧಿಗೆ ತಾನು ಮುಖ್ಯಮಂತ್ರಿಯಾಗಿದ್ದ ವೇಳೆ 5 ಕೋಟಿ ರೂ. ಅನುದಾನ ಮಂಜೂರು ಮಾಡಿರುವುದನ್ನು ಸ್ಮರಿಸಿಕೊಂಡರು.

ಚಿತ್ರ ನಟ ವಿಜಯ ರಾಘವೇಂದ್ರ ಮಾತನಾಡಿ, ಕಂಬಳ ಒಂದು ತಪಸ್ಸು, ಅದರಲ್ಲಿ ಬಹಳಷ್ಟು ಶಕ್ತಿ ಅಡಗಿದೆ ಎಂದ ಅವರು, ತುಳು ಹಾಡನ್ನು ಹಾಡಿ ಸಭಿಕರನ್ನು ರಂಜಿಸಿದರು. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ ಅಮೈ ಮತ್ತು ಕಂಬಳ ಕ್ಷೇತ್ರದ ಸಾಧಕ ಕೇಶವ ಭಂಡಾರಿ ಕೈಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌ ಧ್ರವನಾರಾಯಣ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಶಾಸಕರಾದ ಬೈರತಿ ಸುರೇಶ್, ಬಸವರಾಜ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಶಕುಂತಳಾ ಟಿ.ಶೆಟ್ಟಿ, ಪಿ.ಎಂ.ಅಶೋಕ್, ಶ್ರೀನಿವಾಸ್, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿ.ಸೋಜಾ, ಅಖಿಲ ಭಾರತ ಇಂಟೆಕ್ ಪ್ರಧಾನ ಕಾರ್ಯದರ್ಶಿ ರಾಕೇಶ್ ಮಲ್ಲಿ, ಕಂಬಳ ಸಮಿತಿಯ ಗೌರವಾಧ್ಯಕ್ಷ ವಿನಯಕುಮಾರ್ ಸೊರಕೆ, ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಸಂಚಾಲಕ ಎನ್.ಸುಧಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ, ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Last Updated : Mar 20, 2022, 1:05 PM IST

ABOUT THE AUTHOR

...view details