ಮಂಗಳೂರು: ಕೆಫೆ ಕಾಫಿ ಡೇ ಮಾಲಿಕ ವಿ.ಜಿ.ಸಿದ್ದಾರ್ಥ್ ನಾಪತ್ತೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮಂಗಳೂರಿನ ಸಿಸಿಬಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇತೃತ್ವದ ತಂಡ ಬೆಂಗಳೂರಿಗೆ ದೌಡಾಯಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು.
ಸಿದ್ದಾರ್ಥ್ ಕಣ್ಮರೆ: ತನಿಖೆಗಾಗಿ ಬೆಂಗಳೂರಿಗೆ ತೆರಳಿದ ಉಳ್ಳಾಲ ಪೊಲೀಸರು - ಎಂಎಸ್ ಕೃಷ್ಣ ಅಳಿಯ
ಸಿದ್ದಾರ್ಥ್ ಪತ್ತೆಗಾಗಿ ಮಂಗಳೂರು ಸಿಸಿಬಿ ಪೊಲೀಸ್ ಸಬ್ಇನ್ಸ್ ಪೆಕ್ಟರ್ ನೇತೃತ್ವದ ತಂಡ ಬೆಂಗಳೂರಿಗೆ ತೆರಳಿದ್ದು, ಅವರ ಕುಟುಂಬದವರಿಂದ ಮಾಹಿತಿ ಕಲೆ ಹಾಕುವುದಾಗಿ ತಿಳಿಸಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್
ಅಲ್ಲದೇ ಬೆಂಗಳೂರಿನಲ್ಲಿರುವ ಅವರ ವ್ಯವಹಾರದ ಕಚೇರಿಗೂ ಭೇಟಿ ನೀಡಿ ತಂಡ ವಿಚಾರಣೆ ನಡೆಸಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ರು.
Last Updated : Jul 30, 2019, 10:07 PM IST