ಮಂಗಳೂರು:ಕಜಕಿಸ್ತಾನದ ಆಲ್ಮಾಟಿಯಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ನಲ್ಲಿ ಕದ್ರಿಯ ದೀಪಾ ಕೆ.ಎಸ್. ಮಹಿಳೆಯರ 72 ಕಿಲೋ ವಿಭಾಗದಲ್ಲಿ ನಾಲ್ಕು ಬೆಳ್ಳಿ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಏಷ್ಯನ್ ಪವರ್ ಲಿಫ್ಟಿಂಗ್ನಲ್ಲಿ ಮಂಗಳೂರಿನ ದೀಪಾ ಕೆ ಎಸ್ ಗೆ 4 ಬೆಳ್ಳಿ ಪದಕ - Silver Medal for Deepa Mangaluru
ಕಜಕಿಸ್ತಾನದ ಆಲ್ಮಾಟಿಯಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ನಲ್ಲಿ ಮಂಗಳೂರಿನ ಕದ್ರಿಯ ದೀಪಾ ಕೆ.ಎಸ್. ಮಹಿಳೆಯರ 72 ಕಿಲೋ ವಿಭಾಗದಲ್ಲಿ ನಾಲ್ಕು ಬೆಳ್ಳಿ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಮಂಗಳೂರಿನ ದೀಪಾ ಕೆ.ಎಸ್.ಗೆ 4 ಬೆಳ್ಳಿ ಪದಕ
ಬೆಂಚ್ ಪ್ರೆಸ್, ಸ್ಕಾಟ್, ಡೆಡ್ ಲಿಪ್ಟ್ ಮತ್ತು ಓವರ್ ಆಲ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ದೀಪಾ, ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಮಂಗಳೂರಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಬಲಿಷ್ಠ ಮಹಿಳೆ ಪ್ರಶಸ್ತಿಗೂ ದೀಪಾ ಪಾತ್ರರಾಗಿದ್ದರು.
ಕಾಮನ್ ವೆಲ್ತ್ ಪವರ್ ಲಿಫ್ಟಿಂಗ್ ಜೂನಿಯರ್ ವಿಭಾಗದಲ್ಲಿ ಎರಡು ಚಿನ್ನದ ಪದಕ ಪಡೆದ ಋತ್ವಿಕ್ ಅಲೆವೂರಾಯ ಅವರ ತಾಯಿ ಆಗಿರುವ ದೀಪಾ ಕೆ.ಎಸ್, ಕುಂಜತ್ತೋಡಿ ವಾಸುದೇವ ಭಟ್ ಕದ್ರಿ ಅವರ ಪತ್ನಿ.