ಮಂಗಳೂರು:ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾದ ಸಿಂಧು ಬಿ. ರೂಪೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಸೆಂಥಿಲ್ ರಾಜೀನಾಮೆ: ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ - ದ.ಕ. ಜಿಲ್ಲಾಧಿಕಾರಿ
ಅವಿಭಜಿತ ದ.ಕ. ಜಿಲ್ಲೆಯ 2ನೇ ಮಹಿಳಾ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷವಾಗಿದೆ.
![ಸೆಂಥಿಲ್ ರಾಜೀನಾಮೆ: ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ](https://etvbharatimages.akamaized.net/etvbharat/prod-images/768-512-4365469-897-4365469-1567840976261.jpg)
ಸಿಂಧು ಬಿ. ರೂಪೇಶ್
ಸಿಂಧು ಬಿ. ರೂಪೇಶ್, ನೂತನ ಜಿಲ್ಲಾಧಿಕಾರಿ
ಅಪರ ಜಿಲ್ಲಾಧಿಕಾರಿ ರೂಪಾ ಅವರು ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪ ವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಸೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.
ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿಯಾಗಿದ್ದಾರೆ. 1989ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂಧು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷವಾಗಿದೆ.
Last Updated : Sep 7, 2019, 3:50 PM IST