ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯನ ದರುಶನ ಪಡೆದ ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ಕುಟುಂಬ - ಗಾಯಕ ವಿಜಯ ಪ್ರಕಾಶ್

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಖ್ಯಾತ ಗಾಯಕ ವಿಜಯ ಪ್ರಕಾಶ್ ಕುಟುಂಬ ಸಮೇತರಾಗಿ ಭೇಟಿ ನೀಡಿ, ದರುಶನ ಪಡೆದರು.

singer vijay prakash and family visits Kukke Shri Subrahmanya Temple
ಕುಕ್ಕೆ ಸುಬ್ರಹ್ಮಣ್ಯಕ್ಕೆ ಗಾಯಕ ವಿಜಯ ಪ್ರಕಾಶ್ ಭೇಟಿ

By

Published : Sep 25, 2021, 6:33 AM IST

ಸುಬ್ರಹ್ಮಣ್ಯ/ದಕ್ಷಿಣ ಕನ್ನಡ:ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಪ್ರಖ್ಯಾತ ಗಾಯಕ ವಿಜಯ ಪ್ರಕಾಶ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರುಶನ ಪಡೆದರು.

ಗುರುವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ್ದ ವಿಜಯ ಪ್ರಕಾಶ್, ಶುಕ್ರವಾರ ಶ್ರೀ ದೇವರ ದರ್ಶನ ಪಡೆದು ಶೇಷ ಸೇವೆ ನೆರವೇರಿಸಿದರು. ಶ್ರೀ ದೇವಳದ ಅರ್ಚಕರು ಗಾಯಕ ವಿಜಯ ಪ್ರಕಾಶ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಗಾಯಕ ವಿಜಯ ಪ್ರಕಾಶ್ ಭೇಟಿ

ಈ ಸಂದರ್ಭದಲ್ಲಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ಕುಕ್ಕೆ ಸುಬ್ರಹ್ಮಣ್ಯ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಶಿಷ್ಟಾಚಾರ ವಿಭಾಗದ ಸಿಬ್ಬಂದಿ ಪ್ರಮೋದ್ ಕುಮಾರ್.ಎಸ್, ಕೆ.ಎಂ.ಗೋಪಿನಾಥ್ ನಂಬೀಶ, ಹರೀಶ್ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಮಸೀದಿ, ಚರ್ಚ್​, ದೇವಾಲಯಗಳು ನಾಯಿ ಕೊಡೆಗಳಾಗ್ತವೆ.. ಕೆಲ ನಿರ್ಗತಿಕರಿಗೆ ಆಲಯದೊಳಗೆ ಪ್ರವೇಶವೇ ನಿರ್ಬಂಧ..

ABOUT THE AUTHOR

...view details