ಪುತ್ತೂರು:ಪುತ್ತೂರುತಾಲೂಕಿನಲ್ಲಿ ಇಂದು ಬಾಣಂತಿ ಸೇರಿ ಆರು ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರಿಂದ ಜನತೆ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ 'ಡಿ' ಗ್ರೂಪ್ ನೌಕರರಾಗಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಶಾಂತಿಗೋಡು ಬಳಿಯ ಮಹಿಳೆ, ಅದೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಗರ್ಭಕೋಶದ ಚಿಕಿತ್ಸೆಗೆ ದಾಖಲಾಗಿದ್ದ ಇಬ್ಬರು ಮಹಿಳೆಯರು, ಪುತ್ತೂರಿನ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಬಜತ್ತೂರು ಕಾಂಚನದ ಓರ್ವ ವೃದ್ಧೆ ಮತ್ತು ಬಪ್ಪಳಿಗೆಯ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ.