ಮಂಗಳೂರು:ಕೋವಿಡ್-19ನಿಂದ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಸೇರಿದಂತೆ ಆರು ಜನ ಗುಣಮುಖರಾಗಿ ಇಂದು ಮನೆಗೆ ತೆರಳಿದ್ದಾರೆ.
ಮಂಗಳೂರಿನಲ್ಲಿಂದು ಬಾಲಕ ಸೇರಿ ಆರು ಸೋಂಕಿತರು ಗುಣಮುಖ - Six corona infected persons
ಮಂಗಳೂರಿನಲ್ಲಿಂದು ಆರು ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ಇಂದು 140 ಮಂದಿಯ ಗಂಟಲು ದ್ರವದ ಸ್ಯಾಂಪಲ್ಗಳನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 140 ಮಂದಿಯ ಗಂಟಲು ದ್ರವದ ಸ್ಯಾಂಪಲ್ಗಳನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 259 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 23 ಜನರಲ್ಲಿ ಸೋಂಕು ಇರುವುದು ದೃಢವಾಗಿದೆ. 236 ಮಂದಿಯ ವರದಿ ನೆಗೆಟಿವ್ ಎಂದು ಬಂದಿದೆ. 56 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 29 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. ಇಂದು 402 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 45,354 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.
ಈವರೆಗೆ 11,356 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 11,300 ಮಂದಿಯ ವರದಿ ಬಂದಿದೆ. ಅದರಲ್ಲಿ 10,891 ಮಂದಿಯ ವರದಿ ನೆಗೆಟಿವ್ ಬಂದಿದೆ. 409 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 176 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 225 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.