ಕರ್ನಾಟಕ

karnataka

ETV Bharat / state

ಆಟೋ ಪಿಕಪ್ ನಡುವೆ ಅಪಘಾತ: ನಾಲ್ಕು ವರ್ಷದ ಬಾಲಕ ಸಾವು - ಈಟಿವಿ ಭಾರತ ಕನ್ನಡ

ಕಡಬದಿಂದ ಪಂಜಕ್ಕೆ ಬರುತ್ತಿದ್ದ ಆಟೋರಿಕ್ಷಾಕ್ಕೆ ಪಿಕಪ್​ ವಾಹನ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

small-boy-died-in-road-accident-in-kadaba
ಆಟೋ ಪಿಕಪ್ ನಡುವೆ ಅಪಘಾತ : ನಾಲ್ಕು ವರ್ಷದ ಬಾಲಕ ಸಾವು

By

Published : Nov 10, 2022, 9:49 PM IST

ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕ ಮೃತಪಟ್ಟಿರುವ ಘಟನೆ ಕಡಬ - ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಪಂಜ ನಿವಾಸಿ ನವೀನ್ ಎಂಬವರ ಪುತ್ರ ಹಾರ್ದಿಕ್(4) ಎಂದು ಗುರುತಿಸಲಾಗಿದೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಗೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಪಿಕಪ್​ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ತಕ್ಷಣ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಬಾಲಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಅಲ್ಲದೇ ಪಿಕಪ್ ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಆಟೋ ಚಾಲಕನಿಗೂ ದೃಷ್ಟಿ ದೋಷ ಇರುವ ಬಗ್ಗೆ ತಿಳಿದು ಬಂದಿದೆ. ಘಟನೆ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಲಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್​ಟಿಸಿ ಬಸ್.. 12ಕ್ಕೂ ಅಧಿಕ ಮಂದಿಗೆ ಗಾಯ

ABOUT THE AUTHOR

...view details