ಮಂಗಳೂರು: ಪಂಪ್ವೆಲ್ನಲ್ಲಿರುವ ಇಂಡಿಯಾನಾ ಆಸ್ಪತ್ರೆಯಲ್ಲಿ 70 ವರ್ಷದ ರೋಗಿಯೊಬ್ಬರಿಗೆ ಅಪರೂಪದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ಮೊದಲ ಬಾರಿಗೆ ಇಂತಹ ಕ್ಲಿಷ್ಟಕರ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಗೋವಾದ ರೋಗಿಯೊಬ್ಬರು ಸೈನೋಸಿಸ್ನಿಂದ ಬಳಲುತ್ತಿದ್ದರು. ಅವರಿಗೆ ಎದೆನೋವು, ಉಸಿರಾಟದ ತೊಂದರೆ ಮತ್ತು ಹೃದಯ ಸಂಬಂಧಿಸಿದ ಸಮಸ್ಯೆಗಳಿದ್ದವು. ಇಂಡಿಯಾನ ಆಸ್ಪತ್ರೆಯಲ್ಲಿ ಹೃದಯದ ಧಮನಿಯ ಬ್ಲಾಕ್‌ಗಳನ್ನು ಆ್ಯಂಜಿಯೋಪ್ಲಾಸ್ಟಿ ಮತ್ತು ಟ್ರಾನ್ಸ್ ಕ್ಯಾಥಿಟರ್ ಆರ್ಟಿಕ್ ವಾಲ್ವ್ ಇಂಪ್ಲಾಂಟೇಷನ್ ಮೂಲಕ ತೆರವುಗೊಳಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿಸಿದರು.