ಬಂಟ್ವಾಳ:ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ನೇರ ಪ್ರಸಾರವನ್ನು ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಭಕ್ತರು ವೀಕ್ಷಿಸಿದರು.
ಶಿಲಾನ್ಯಾಸ ಸಂದರ್ಭ ಶಂಖ, ಜಾಗಟೆ, ಚಂಡೆ ವಾದ್ಯದ ಮೂಲಕ ವಿಜಯೋತ್ಸವದ ಸಂಭ್ರಮವನ್ನು ಆಚರಿಸಲಾಯಿತು. ಬಳಿಕ ಭಜನಾ ಕಾರ್ಯಕ್ರಮ, ಮಹಾ ಮಂಗಳಾರತಿ ನಡೆಯಿತು. ಇದೇ ವೇಳೆ ಸಿಹಿತಿಂಡಿ ವಿತರಿಸಲಾಯಿತು.
ಅಯೋಧ್ಯೆ ಕರಸೇವೆ ವೇಳೆ ಅದರ ನೇತೃತ್ವ ವಹಿಸಿದ್ದ ಹಿರಿಯ ಆರ್ಎಸ್ಎಸ್ ನಾಯಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಧ್ಯಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಸನ್ಮಾನಿಸಲಾಯಿತು.
ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ಶ್ರೀರಾಮನಿಗೆ ಪೂಜೆ ನೆರವೇರಿಸಿದರು. ಈ ವೇಳೆ ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ, ರಾಷ್ಟ್ರಸೇವಿಕಾ ಪ್ರಾಂತ ಪ್ರಮುಖ್ ಕಮಲಾ ಪ್ರಭಾಕರ ಭಟ್, ಶ್ರೀರಾಮ ಮಂದಿರ ಆಡಳಿತ ಸಮಿತಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ವಿಹಿಂಪ ವಿಟ್ಲ ಪ್ರಖಂಡ ಅಧ್ಯಕ್ಷ ಕ.ಕೃಷ್ಣಪ್ಪ, ಬಜರಂಗದಳ ವಿಟ್ಲ ಅಧ್ಯಕ್ಷ ಮಿಥುನ್ ಸಹಿತ ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.