ಕರ್ನಾಟಕ

karnataka

ETV Bharat / state

ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ - bantwala news 2020

ರಾಜ್ಯದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದ ಹಿನ್ನೆಲೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು..

special-worship-of-sri-rajarajeshwari-by-education-minister-suresh-kumar
ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ.

By

Published : Jul 10, 2020, 7:17 PM IST

ಬಂಟ್ವಾಳ: ಕೊರೊನಾ ಆತಂಕದ ನಡುವೆಯೂ ಎಸ್ಎಸ್ಎಲ್​ಸಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದರ ಹಿನ್ನೆಲೆ ಶಿಕ್ಷಣ ಸಚಿವ ಎಸ್ ಸುರೇಶ್‌ಕುಮಾರ್ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ

ಇದೇ ವೇಳೆ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ತಾಲೂಕಿನ ಶಿಕ್ಷಕರ ತಂಡವನ್ನು ಅಭಿನಂದಿಸಿದ ಅವರು, ನಿರಾತಂಕವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಮಕ್ಕಳು ಹಾಗೂ ಅವರಿಗೆ ನೆರವಾದ ಪೋಷಕರಿಗೆ ಧನ್ಯವಾದ ಸಲ್ಲಿಸಿದರು.

ಈ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ತಾಲೂಕು ಪಂಚಾಯತ್‌ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಶಿಕ್ಷಣಾಧಿಕಾರಿ ಜ್ಞಾನೇಶ್ ಮತ್ತು ಇತರರು ಈ ವೇಳೆ ಉಪಸ್ಥಿತರಿದ್ದರು.

ABOUT THE AUTHOR

...view details