ಕರ್ನಾಟಕ

karnataka

ETV Bharat / state

ಸೆಪ್ಟಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಕಡಲೂರಲ್ಲಿ ಎಸ್​ಪಿಜಿ ತಂಡದಿಂದ ಪರಿಶೀಲನೆ - Etv Bharat Kannada

ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಎಸ್​​ಪಿಜಿ ತಂಡ ನಗರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

ಸೆಪ್ಟಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ
ಸೆಪ್ಟಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ

By

Published : Aug 30, 2022, 1:02 PM IST

ಮಂಗಳೂರು: ಸೆ.2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಎಸ್​​ಪಿಜಿ ತಂಡ ನಗರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಎಸ್​ಪಿಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ತಂಡದಲ್ಲಿ ಡಿಜಿಐ ರ‌್ಯಾಂಕ್​​ನ ಅಧಿಕಾರಿ ಸೇರಿದಂತೆ ಏಳು ಮಂದಿ ಅಧಿಕಾರಿಗಳ ತಂಡ ಸೋಮವಾರ ಮಂಗಳೂರಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇಂದು ಮತ್ತಷ್ಟು ಭದ್ರತಾ ಪಡೆಯ ಸಿಬ್ಬಂದಿ ಬರಲಿದ್ದಾರೆ.

ಸೋಮವಾರ ಆಗಮಿಸಿರುವ ತಂಡ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಭದ್ರತಾ ವ್ಯವಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರಧಾನಿಯವರ ಆಗಮನದ ವೇಳೆ ಭದ್ರತಾ ಶಿಷ್ಟಾಚಾರದ ಬಗ್ಗೆ ನಿರ್ದೇಶನ ನೀಡಿದೆ. ಅಲ್ಲದೆ ಎನ್ಎಂಪಿಎಗೂ ತೆರಳಿ ಪರಿಶೀಲನೆ ನಡೆಸಿರುವ ತಂಡ, ಎನ್ಎಂಪಿಎ ಅಧ್ಯಕ್ಷ ಹಾಗೂ ಅಧಿಕಾರಿಗಳು, ಜಿಲ್ಲಾಡಳಿತ, ಪೊಲೀಸ್ ಅಧಿಕಾರಿಗಳೊಂದಿಗೂ ಸಭೆಗಳನ್ನು ನಡೆಸಿದೆ.

ಸೆಪ್ಟಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಸಾರ್ವಜನಿಕ ಸಭೆ ನಡೆಯುವ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನಕ್ಕೂ ಭೇಟಿ ನೀಡಿರುವ ಎಸ್​​ಪಿಜಿ ತಂಡ, ಮಾಡಲಾಗುತ್ತಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಕೆಲವೊಂದು ಬದಲಾವಣೆಗಳನ್ನು ಸೂಚಿಸಿದೆ. ಅಲ್ಲದೆ ಎಸ್​​ಪಿಜಿ ತಂಡ ಇಡೀ ಪ್ರದೇಶವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ.

(ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆಯಲ್ಲಿ ಮಾದರಿ ಕೆರೆ ನಿರ್ಮಾಣ.. ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಶ್ಲಾಘನೆ)

ABOUT THE AUTHOR

...view details