ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳು ಆರಂಭವಾಗಿದ್ದು, ಕೇರಳ ವಿದ್ಯಾರ್ಥಿಗಳು ಸಹ ಹಾಜರಾಗಿದ್ದಾರೆ.
ರಾಜ್ಯ ಸರ್ಕಾರದ ಸೂಚನೆಯಂತೆ ಇಂದಿನಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳು ಆರಂಭವಾಗಿವೆ. ಅದರಂತೆ ಮಂಗಳೂರಿನಲ್ಲಿ ಕೂಡ ಶಾಲಾ - ಕಾಲೇಜುಗಳು ಆರಂಭವಾಗಿದ್ದು, ತರಗತಿಗಳಿಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಹಾಜರಾಗಿದ್ದಾರೆ.
ದ.ಕ ಜಿಲ್ಲೆಯಲ್ಲಿ ಇಂದಿನಿಂದ SSLC ಮತ್ತು PUC ತರಗತಿಗಳು ಆರಂಭ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿರುವ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳಿಗೆ ಹಾಜರಾಗಿದ್ದಾರೆ.
ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುವ ಕೇರಳದ 22 ವಿದ್ಯಾರ್ಥಿಗಳಿದ್ದು, ಅದರಲ್ಲಿ 21 ವಿದ್ಯಾರ್ಥಿಗಳು ಇಂದು ತರಗತಿಗೆ ಹಾಜರಾಗಿದ್ದಾರೆ.
ಶಾಲೆ ಮತ್ತು ಕಾಲೇಜಿನಲ್ಲಿ ಕೊರೊನಾ ಮುನ್ನೆಚ್ಚರಿಕೆಯಾಗಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಲಾಗಿದೆ. ತರಗತಿ ಆರಂಭಕ್ಕೂ ಮುಂಚೆ ಶಾಲಾ ಕೊಠಡಿಗಳನ್ನು ಸ್ಯಾನಿಟೈಸೇಷನ್ ಮಾಡಲಾಗಿದೆ. ಹಾಗೂ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮೊದಲು ಅವರ ತಾಪಮಾನ ಪರೀಕ್ಷಿಸಿ ಸ್ಯಾನಿಟೈಸ್ ಮಾಡಿ ತರಗತಿಗೆ ಪ್ರವೇಶ ನೀಡಲಾಗಿದೆ.
ಶಾಲೆ ಸಿಂಗಾರ:ಮಂಗಳೂರಿನ ಕಾರ್ ಸ್ಟ್ರೀಟ್ನ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶಾಲಾರಂಭಕ್ಕೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಕಾಲೇಜನ್ನು ಸಿಂಗರಿಸಲಾಗಿದೆ. ಶಾಲೆಗೆ ಆಗಮಿಸುವ ವೇಳೆ ವಿದ್ಯಾರ್ಥಿಗಳಲ್ಲಿ ಖುಷಿ ಮೂಡಿಸಲು ಅಲಂಕಾರ ಮಾಡಲಾಗಿದೆ. ಈ ಶಾಲೆಗೆ ರೋಟರಿ ಕ್ಲಬ್ ಹಿಲ್ ಸೈಡ್ ನಿಂದ ತಾಪಮಾನ ಪರೀಕ್ಷೆ ಮತ್ತು ಸ್ಯಾನಿಟೈಷೇಷನ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ.