ಕರ್ನಾಟಕ

karnataka

ETV Bharat / state

ಶಿರಾಡಿ ಗ್ರಾಮ ಪಂಚಾಯತ್ ಪಿಡಿಒಗೆ ರಾಜ್ಯ ಮಟ್ಟದ ಪ್ರಶಸ್ತಿ - ಶಿರಾಡಿ ಗ್ರಾಮ ಪಂಚಾಯತ್

ಶಿರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ವೆಂಕಟೇಶ್ ಅವರು ರಾಜ್ಯ ಮಟ್ಟದ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎನ್ನುವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

Shiradi Gram Panchayat PDO P.venkatesh
ಶಿರಾಡಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪಿ.ವೆಂಕಟೇಶ್

By

Published : Apr 8, 2021, 11:34 AM IST

ಶಿರಾಡಿ (ದ.ಕ):ದಕ್ಷಿಣ ಕನ್ನಡ ಜಿಲ್ಲೆ ವಿಭಾಗದಲ್ಲಿ, ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ.

ಶಿರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ವೆಂಕಟೇಶ್ ಅವರು ಸರ್ಕಾರ ನಿಗದಿಪಡಿಸಿದ ಗುರಿಯನ್ನು ಮೀರಿ ರಾಜ್ಯ ಮಟ್ಟದ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎನ್ನುವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಈ ಮೂಲಕ ಶಿರಾಡಿ ಗ್ರಾಮ ಪಂಚಾಯತ್ ದುಪ್ಪಟ್ಟು ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿಗೆ ಭಾಜನವಾಗಿದೆ.

ದಿನಾಂಕ ಏಪ್ರಿಲ್​ 9ರಂದು ಹುಬ್ಬಳ್ಳಿಯಲ್ಲಿ ನಡೆಯುವ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details