ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ ಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ..
ಹುದ್ದೆ ವಿವರ:ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಇಲ್ಲಿದೆ.
- ಶೀಘ್ರ ಲಿಪಿಗಾರ ಹುದ್ದೆ- 10
- ಬೆರಳಚ್ಚುಗಾರ ಹುದ್ದೆ 6
- ಬೆರಳಚ್ಚು-ನಕಲುಗಾರ ಹುದ್ದೆ- 2
- ಜವಾನ ಹುದ್ದೆಗಳು -36
ವಿದ್ಯಾರ್ಹತೆ: ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ನಕಲಿಗಾರ ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್ ಕರ್ಮಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರ ಲಿಪಿ ಮತ್ತು ಬೆರಳಚ್ಚಿನಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಗರಿಷ್ಠ 35 ವರ್ಷ ಪೂರೈಸಿರಬೆಕು. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.