ಬಂಟ್ವಾಳ (ದಕ್ಷಿಣ ಕನ್ನಡ):ಅಪ್ರಾಪ್ತ ಮಗಳ ಮೇಲೆಮಲತಂದೆಯೊಬ್ಬ ಹೀನ ಕೃತ್ಯ ಎಸಗಿದ್ದಾನೆ. ಮಲತಂದೆಯ ನಿರಂತರ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಮಲ ತಂದೆಯಿಂದ ಅತ್ಯಾಚಾರ - ಪುರೋಹಿತ ವೃತ್ತಿ ಮಾಡುತ್ತಿದ್ದ ಆರೋಪಿ ತಂದೆ
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತ ಮಗಳ ಮೇಲೆ ಮಲತಂದೆಯಿಂದ ಅತ್ಯಾಚಾರ
ಪುರೋಹಿತ ವೃತ್ತಿ ಮಾಡುತ್ತಿದ್ದ ಆರೋಪಿ ತಂದೆಯನ್ನು ಬಂಟ್ವಾಳ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತುಂಬೆಯಲ್ಲಿ ಪುರೋಹಿತ ಕೆಲಸ ಮಾಡುತ್ತಿದ್ದ ಆರೋಪಿಯು ತನ್ನ ಪತ್ನಿಯ ಮೊದಲ ಪತಿಯ ಮಗಳ ಮೇಲೆ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
(ಓದಿ: ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ.. ಮಹಿಳೆ ಸೇರಿ 9 ಮಂದಿ ಬಂಧನ)