ಕರ್ನಾಟಕ

karnataka

By

Published : Mar 15, 2020, 2:05 PM IST

ETV Bharat / state

ತ್ಯಾಜ್ಯ ಸಾಗಾಟಕ್ಕೆ ಅಡ್ಡಿಪಡಿಸಿದರೆ ಕಠಿಣ ಕ್ರಮ: ಮಂಗಳೂರು ಸಹಾಯಕ ಆಯುಕ್ತ

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಒಣಕಸವನ್ನು ಭಾನುವಾರದಿಂದಲೇ ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಬಾಕಿ ಉಳಿದಿರುವ ಕೆಲಸವನ್ನೂ ಶೀಘ್ರದಲ್ಲೇ ಪ್ರಾರಂಭಿಸಬೇಕು. ಈ ಸಂದರ್ಭ ಯಾರಾದರೂ ಅಡ್ಡಿಪಡಿಸಿದ್ದಲ್ಲಿ ಅಂಥವರ ವಿರುದ್ದ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸಹಾಯಕ ಆಯುಕ್ತ, ಪುರಸಭೆಯ ಆಡಳಿತಾಧಿಕಾರಿ ಮದನ್ ಮೋಹನ್ ಸಿ. ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Mangalore Assistant Commissioner
ಮಂಗಳೂರು ಸಹಾಯಕ ಆಯುಕ್ತರ ಸಭೆ

ಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಒಣಕಸವನ್ನು ಸಜಿಪನಡು ಗ್ರಾಪದ ಕಂಚಿನಡ್ಕಪದವಿಗೆ ಸಾಗಿಸುವ ವೇಳೆ ಅಡ್ಡಿಪಡಿಸಿದರೆ, ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪುರಸಭಾ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಒಣಕಸವನ್ನು ಭಾನುವಾರದಿಂದಲೇ ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಬಾಕಿ ಉಳಿದಿರುವ ಕೆಲಸವನ್ನೂ ಶೀಘ್ರದಲ್ಲೇ ಪ್ರಾರಂಭಿಸಬೇಕು. ಈ ಸಂದರ್ಭ ಯಾರಾದರೂ ಅಡ್ಡಿಪಡಿಸಿದ್ದಲ್ಲಿ ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸಹಾಯಕ ಆಯುಕ್ತ, ಪುರಸಭೆಯ ಆಡಳಿತಾಧಿಕಾರಿ ಮದನ್ ಮೋಹನ್ ಸಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳೂರು ಸಹಾಯಕ ಆಯುಕ್ತರ ಸಭೆ

ಕಂಚಿನಡ್ಕಪದವು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಮಾ. 11ರಂದು ತ್ಯಾಜ್ಯವನ್ನು ಸಾಗಿಸಿದ ವೇಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶನಿವಾರ ಬಂಟ್ವಾಳ ಪುರಸಭಾ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯರ ಸಭೆಯಲ್ಲಿ ಪುರಸಭೆ ಆಡಳಿತಾಧಿಕಾರಿ ಮಾತನಾಡಿದರು.

ABOUT THE AUTHOR

...view details