ಮಂಗಳೂರು: ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ಮಂಗಳೂರಿನ ಉಳ್ಳಾಲದ ಉಳಿಯದಲ್ಲಿ ನಡೆದಿದೆ.
ಉಳ್ಳಾಲದ ಕಿನ್ಯಾ ಮೀನಾದಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಟೈಟಸ್ ಡಿಸೋಜಾ ಎಂಬುವರ ಪುತ್ರಿ ಸ್ಟೆನಿಟಾ ಡಿಸೋಜಾ(15) ಮೃತಪಟ್ಟ ವಿದ್ಯಾರ್ಥಿನಿ. ಸ್ಟೆನಿಟಾ ಡಿಸೋಜಾ ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ಮಾ. 16ರಂದು ಡೆಂಗ್ಯೂ ಜ್ವರದಿಂದ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅಲ್ಲಿ ಗುಣಮುಖಳಾಗದ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಉಸಿರಾಟದ ಸಮಸ್ಯೆ ಉಂಟಾಗಿ 8 ದಿನಗಳ ಕಾಲ ವೆಂಟಿಲೇಟರ್ನಲ್ಲೇ ಇರಿಸಲಾಗಿತ್ತು.
ಮಂಗಳೂರಿನಲ್ಲಿ ಡೆಂಗ್ಯೂಗೆ ವಿದ್ಯಾರ್ಥಿನಿ ಬಲಿ
ಚಿಕಿತ್ಸೆ ಫಲಕಾರಿಯಾಗದೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ಮಂಗಳೂರಿನ ಉಳ್ಳಾಲದ ಉಳಿಯದಲ್ಲಿ ನಡೆದಿದೆ. ಸ್ಟೆನಿಟಾ ಡಿಸೋಜಾ ಮೃತಪಟ್ಟ ವಿದ್ಯಾರ್ಥಿನಿ ಎನ್ನಲಾಗಿದೆ.
ಸ್ಟೆನಿಟಾ ಡಿಸೋಜ ಮೃತ ವಿದ್ಯಾರ್ಥಿನಿ
ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ನಿನ್ನೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.