ಕರ್ನಾಟಕ

karnataka

ETV Bharat / state

ಜೀಪ್-ಸ್ಕೂಟರ್ ನಡುವೆ ಅಪಘಾತ: ಓರ್ವ ವಿದ್ಯಾರ್ಥಿ ಮೃತ, ಮತ್ತೋರ್ವ ಗಂಭೀರ - student died by accident in sulya

ಅಪಘಾತದಲ್ಲಿ ವಿದ್ಯಾರ್ಥಿ ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟರೆ, ದರ್ಶನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಇಬ್ಬರನ್ನೂ ಮೊದಲು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು.

student-died-by-accident-in-sulya
ಮೃತ ವಿದ್ಯಾರ್ಥಿ

By

Published : Mar 23, 2022, 7:12 PM IST

ಸುಳ್ಯ:ಬೈಕ್ ಹಾಗೂ ಜೀಪ್​ ಮಧ್ಯೆ ಅಪಘಾತ ನಡೆದು ಬೈಕ್​​ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಹಾಗೂ ಗಾಯಾಳು ವಿದ್ಯಾರ್ಥಿ ಇಬ್ಬರೂ ಸುಳ್ಯದ ಸೈಂಟ್ ಜೋಸೆಫ್ ಶಾಲೆಯಲ್ಲಿ 9ನೇ ತರಗತಿ ಅಧ್ಯಯನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕ್​​ನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಕುಂಬಳಚೇರಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪ್​ ತಪ್ಪಿಸಲು ಬ್ರೇಕ್ ಹಾಕಿದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಜೀಪಿಗೆ ಗುದ್ದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿ ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟರೆ, ದರ್ಶನ್ ಎಂಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಅವರಿಬ್ಬರನ್ನೂ ಸುಳ್ಯ ಸರ್ಕಾರಿ ಆಸ್ಪತ್ರೆಗೆ ತರಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ದರ್ಶನ್​ನನ್ನು ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ವಿಶ್ವದೀಪ್ ಮೃತ ಶರೀರವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ:ಶೇ.40 ಕಮಿಷನ್ ಆರೋಪ ಮೇಲೆ ಚರ್ಚೆಗೆ ಅವಕಾಶ ನಿರಾಕರಣೆ : ಸಿಎಂ ಬೊಮ್ಮಾಯಿ-ಸಿದ್ದರಾಮಯ್ಯ ಜಟಾಪಟಿ

ABOUT THE AUTHOR

...view details