ಮಂಗಳೂರು: ನಗರದ ಹೊರವಲಯದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್‌ನ 231 ವಿದ್ಯಾರ್ಥಿನಿಯರು ಗೀ ರೈಸ್ ಮತ್ತು ಚಿಕನ್ ಕಬಾಬ್ ತಿಂದು ಫುಡ್ ಪಾಯಿಸನ್ನಿಂದ ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ನೀಡಿರುವ ದೂರಿನಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ದ ಕೇಸು ದಾಖಲಾಗಿದೆ. ಸಂಶಯಾಸ್ಪದ ವಿಷಕಾರಿ ಆಹಾರವನ್ನು ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ನೀಡಲಾಗಿದೆ. ಆಹಾರ ತಯಾರಿಕೆ ಹಾಗೂ ಪೂರೈಕೆಯಲ್ಲಿ ಶುಚಿತ್ವ ಕಾಪಾಡದೇ ನಿರ್ಲಕ್ಷ್ಯ ವಹಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸುವ ಸಂದರ್ಭವೂ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೇ ಲೋಪ ಎಸಗಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಆಹಾರ ಸುರಕ್ಷಿತಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಪ್ರಾಂಶುಪಾಲರು, ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿಗಳು ಜಂಟಿಯಾಗಿ ಹಾಸ್ಟೆಲ್‌ನ ಆಹಾರ ತಯಾರಿಕಾ ಕೊಠಡಿಗೆ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ತಯಾರಿಸಿರುವ ಆಹಾರ ಪದಾರ್ಥಗಳು, ಕುಡಿಯುವ ನೀರು ಫ್ರಿಡ್ಜ್‌ನಲ್ಲಿದ್ದ ಮಾಂಸ ಇನ್ನಿತರೆ ಆಹಾರ ವಸ್ತುಗಳನ್ನು ತಂಡ ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸುವ ವ್ಯವಸ್ಥೆ ಮಾಡಿದೆ. ಅಲ್ಲದೇ ತಕ್ಷಣದಿಂದ ಅಡುಗೆ ಮನೆಯಲ್ಲಿ ಯಾವುದೇ ಆಹಾರ ಪದಾರ್ಥಗಳನ್ನು ತಯಾರಿಸದಂತೆ ನಿರ್ಬಂಧ ವಿಧಿಸಿದೆ.
ಇದನ್ನೂ ಓದಿ:ಐತಿಹಾಸಿಕ ಲಕ್ಕುಂಡಿ ಉತ್ಸವ-2023: ಫೆ.10ರಂದು ಮುಖ್ಯಮಂತ್ರಿಗಳಿಂದ ಚಾಲನೆ