ಕರ್ನಾಟಕ

karnataka

ETV Bharat / state

ಅಯೋಧ್ಯೆ ಭೂಮಿ ಪೂಜೆ ಹಿನ್ನೆಲೆ.. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಹಿಂದೂ,ಮುಸ್ಲಿಂ, ಕ್ರೈಸ್ತ ಹಾಗೂ ಎಲ್ಲಾ ಸಂಘಟನೆಯ ಮುಖಂಡರು ಕಾನೂನಿಗೆ ಗೌರವ ಕೊಟ್ಟು ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರ ಜೊತೆ ಸಹಕರಿಸಬೇಕೆಂದು ಮನವಿ..

Sub inspector meeting
Sub inspector meeting

By

Published : Aug 3, 2020, 4:00 PM IST

ಬೆಳ್ತಂಗಡಿ : ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆಯಲಿರುವ ಹಿನ್ನೆಲೆ ತಾಲೂಕಿನ ವಿವಿಧ ಗ್ರಾಮಗಳ ಶಾಂತಿ ಸಮಿತಿ‌ ಸದಸ್ಯರ ಜೊತೆ ಸಬ್‌ ಇನ್ಸ್‌ಪೆಕ್ಟರ್ ನಂದಕುಮಾರ್ ಅವರು ಸಭೆ ನಡೆಸಿದರು.

ನಗರದ ಪೊಲೀಸ್ ಠಾಣಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ವೋನ್ನತ ನ್ಯಾಯಾಲಯದ ಆದೇಶದಂತೆ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕಾಗಿ ಭೂಮಿ ಪೂಜೆ ಕಾರ್ಯಕ್ರಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹಿಂದೂ,ಮುಸ್ಲಿಂ, ಕ್ರೈಸ್ತ ಹಾಗೂ ಎಲ್ಲಾ ಸಂಘಟನೆಯ ಮುಖಂಡರು ಕಾನೂನಿಗೆ ಗೌರವ ಕೊಟ್ಟು ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರ ಜೊತೆ ಸಹಕರಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದು,ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಶಂಕರ್ ಹೆಗ್ಡೆ,ಎಸ್‌ಡಿಪಿಐಯ ಅಕ್ಬರ್‌ ಆಲಿ, ಕುವೆಟ್ಟು ಗ್ರಾಪಂ ಮಾಜಿ ಅಧ್ಯಕ್ಷ ಅಶೋಕ್‌ ಕೋಟ್ಯಾನ್, ಕಾಜೂರಿನ ರಫೀಕ್ ಶೇಖರ್ ಲಾಯ್ಲ ಪ್ರೊಬೇಶನರಿ, ಪಿಎಸ್ಐ ಶ್ರೀ ಶರತ್ ಕುಮಾರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು.

ABOUT THE AUTHOR

...view details