ಸುಬ್ರಹ್ಮಣ್ಯ (ದಕ್ಷಿಣ ಕನ್ನಡ):ಕರ್ನಾಟಕದ ಪ್ರಸಿದ್ಧ ಪುಣ್ಯ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈ ಬಿಟ್ಟಿರುವ ರಾಜ್ಯ ಸರ್ಕಾರ, ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ದೇವಸ್ಥಾನ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಸಮಿತಿ ರಚಿಸಿ ಸರ್ಕಾರ ಆದೇಶ - ರಾಜ್ಯ ಸರಕಾರ ಆದೇಶ
ರಾಜ್ಯ ಸರ್ಕಾರವು ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.
subramanya
ಮೋಹನ್‌ರಾಮ್, ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ ಮತ್ತು ಶ್ರೀಮತಿ ವನಜಾ ಭಟ್ ಅವರನ್ನು ಅಭಿವೃದ್ಧಿ ಸಮಿತಿ ಸದಸ್ಯರಾಗಿ ಹಾಗೂ ಕಾರ್ಯದರ್ಶಿಯಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಹೆಚ್. ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.