ಕರ್ನಾಟಕ

karnataka

ETV Bharat / state

ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಸ್ಕರ್ ಫರ್ನಾಂಡಿಸ್​ಗೆ ಯಶಸ್ವಿ ಶಸ್ತ್ರಚಿಕಿತ್ಸೆ - ಕಾಂಗ್ರೆಸ್​ ನಾಯಕ ಆಸ್ಕರ್ ಫೆರ್ನಾಂಡಿಸ್ ಸುದ್ದಿ,

ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಸ್ಕರ್ ಫರ್ನಾಂಡಿಸ್​ಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

unconscious Oscar Fernandez, successful surgery for unconscious Oscar Fernandez, Mangalore news, congress leader Oscar Fernandez, congress leader Oscar Fernandez news, ಆಸ್ಕರ್ ಫೆರ್ನಾಂಡಿಸ್​ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಸ್ಕರ್ ಫೆರ್ನಾಂಡಿಸ್​ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಮಂಗಳೂರು ಸುದ್ದಿ, ಕಾಂಗ್ರೆಸ್​ ನಾಯಕ ಆಸ್ಕರ್ ಫೆರ್ನಾಂಡಿಸ್, ಕಾಂಗ್ರೆಸ್​ ನಾಯಕ ಆಸ್ಕರ್ ಫೆರ್ನಾಂಡಿಸ್ ಸುದ್ದಿ,
ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಸ್ಕರ್ ಫೆರ್ನಾಂಡಿಸ್​ಗೆ ಯಶಸ್ವಿ ಶಸ್ತ್ರಚಿಕಿತ್ಸೆ

By

Published : Jul 27, 2021, 8:10 AM IST

Updated : Jul 27, 2021, 8:38 AM IST

ಮಂಗಳೂರು;ಪ್ರಜ್ಞಾಹೀನ ಸ್ಥಿತಿಯಲ್ಲಿ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ಗೆ ತಡರಾತ್ರಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಯಿತು.

ತಡರಾತ್ರಿ ಆಸ್ಕರ್ ಫರ್ನಾಂಡಿಸ್​ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮೆದುಳಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿದೆ. ಆಸ್ಕರ್ ಫರ್ನಾಂಡೀಸ್ ಅವರು ಯೋಗ ಮಾಡುವ ವೇಳೆ ಬಿದ್ದ ಸಂದರ್ಭದಲ್ಲಿ ತಲೆಯ ಒಳಭಾಗದಲ್ಲಿ ಗಾಯವಾಗಿ ಮೆದುಳಿನ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.

ಕಳೆದ ಒಂದು ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರನ್ನು ನಿನ್ನೆ ಡಾ. ದಿವಾಕರ್ ರಾವ್, ಡಾ ಸುನಿಲ್ ಶೆಟ್ಟಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ರಕ್ತ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿರುವುದರಿಂದ ಅವರಿಗೆ ಶೀಘ್ರ ಪ್ರಜ್ಞೆ ಮರಳುವ ನಿರೀಕ್ಷೆ ಇದೆ.

ಭಾನುವಾರ ಬೆಳಗ್ಗೆ ಯೋಗ ಮಾಡುವ ಸಂದರ್ಭ‌ ಆಸ್ಕರ್ ಫರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಯಾವುದೇ ಗಾಯವಾಗಿಲ್ಲವೆಂದು ಇದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Last Updated : Jul 27, 2021, 8:38 AM IST

ABOUT THE AUTHOR

...view details