ಸುಳ್ಯ (ದ.ಕ):ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 71ನೇ ಜನ್ಮದಿನಾಚರಣೆ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಕಾರ್ಡ್ ಮೂಲಕ ಪ್ರಧಾನಿಗೆ ಶುಭಾಶಯ ಕೋರಲಿದ್ದಾರೆ.
ಸುಳ್ಯ: ಪ್ರಧಾನಿ ಹುಟ್ಟುಹಬ್ಬಕ್ಕೆ ಪೋಸ್ಟ್ ಕಾರ್ಡ್ ಮೂಲಕ ಶುಭಾಶಯಗಳ ಸುರಿಮಳೆ - sullia
ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರವರೆಗೆ ಪ್ರಧಾನಿ ನರೇಂದ್ರ ಮೋದಿಯವರ ದೆಹಲಿಯ ನಿವಾಸದ ವಿಳಾಸಕ್ಕೆ ಹುಟ್ಟುಹಬ್ಬದ ಶುಭಾಶಯ ಕೋರುವ ಪೋಸ್ಚ್ ಕಾರ್ಡುಗಳನ್ನು ರವಾನೆ ಮಾಡಲಾಗುತ್ತದೆ ಎಂದು ಸುಳ್ಯ ಬಿಜೆಪಿ ಮಂಡಲ ಪ್ರಮುಖರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಸುಳ್ಯ ತಾಲೂಕಿನ ಪ್ರತೀ ಬೂತ್ಗಳಿಂದ 1000ದಷ್ಟು ಶುಭಾಶಯ ಕೋರುವ ಪೋಸ್ಚ್ ಕಾರ್ಡ್ಗಳನ್ನು ರವಾನೆ ಮಾಡಲಾಗುತ್ತದೆ ಎಂದು ಸುಳ್ಯ ಬಿಜೆಪಿ ಮಂಡಲದ ಪ್ರಮುಖರು ತಿಳಿಸಿದ್ದಾರೆ.
ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ದೆಹಲಿಯ ನಿವಾಸದ ವಿಳಾಸಕ್ಕೆ ಈ ಕಾರ್ಡ್ಗಳನ್ನು ಕಳುಹಿಸಲಾಗುವುದು ಎಂದು ತಿಳಿದು ಬಂದಿದೆ. ಶುಭಾಶಯ ಕಾರ್ಡ್ನಲ್ಲಿ ಭಾರತದಾದ್ಯಂತ ಉಚಿತ ಕೋವಿಡ್ ಲಸಿಕೆ ನೀಡಿರುವುದಕ್ಕೆ ಪ್ರಧಾನಿ ಅವರಿಗೆ ಕೃತಜ್ಞತೆ ಸಲ್ಲಿಸಲಾಗಿದೆ.