ಮಂಗಳೂರು: ಸುಳ್ಯ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ ಅವರಿಗೆ ಸುಳ್ಯ ತಾಲೂಕು ಪಂಚಾಯತ್ನಿಂದ ಮನವಿ ಸಲ್ಲಿಸಲಾಯಿತು.
ಸುಳ್ಯ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವ ಈಶ್ವರಪ್ಪಗೆ ಮನವಿ - ಸುಳ್ಯ ತಾಲೂಕು ಪಂಚಾಯಿತ್ನಿಂದ ಮನವಿ
ಸುಳ್ಯ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ ಅವರಿಗೆ ಸುಳ್ಯ ತಾಲೂಕು ಪಂಚಾಯತ್ನಿಂದ ಮನವಿ ಸಲ್ಲಿಸಲಾಯಿತು.

ಸುಳ್ಯ ತಾಲೂಕು ಪಂಚಾಯಿತ್ನಿಂದ ಸಚಿವ ಈಶ್ವರಪ್ಪಗೆ ಮನವಿ
ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ಉಡುಪಿಯ ಕೋಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನವಿಯನ್ನು ಸಲ್ಲಿಸಲಾಗಿದೆ. ತಾಲೂಕಿನಲ್ಲಿ ಕೆಲವು ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಬೇಕು. ಹಾಗೂ ಪಂಚಾಯತ್ಗಳ ಸಬಲೀಕರಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ತಾ. ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಮತ್ತು ತಾ.ಪಂ. ಸದಸ್ಯ ರಾಧಾಕೃಷ್ಣ ಬೊಳ್ಳೂರು ಅವರು ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.