ಮಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದ ಸುಮಲತಾ
ಇಂದು ಸುಮಲತಾ ಅಂಬರೀಶ್ ಅವರು ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ ಅವರ ಜೊತೆ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
ಸುಮಲತಾ ಅಂಬರೀಶ್
ಮುಂಜಾನೆ 5 ಗಂಟೆಗೆ ಸುಮಲತಾ ಅವರು ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ ಅವರ ಜೊತೆ ಧರ್ಮಸ್ಥಳಕ್ಕೆ ಆಗಮಿಸಿ ಹತ್ತು ಗಂಟೆಗೆ ದೇವರ ದರ್ಶನ ಮಾಡಿದ್ದಾರೆ. ದೇವರ ದರ್ಶನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರಹೆಗ್ಗಡೆಯವರನ್ನುಭೇಟಿ ಮಾಡಿ ಮಾತುಕತೆ ನಡೆಸಿದರು .