ಮಂಗಳೂರು: ಲಾಕ್ ಡೌನ್ ಹಿನ್ನೆಲೆ ನಗರದಲ್ಲಿ ವಾಹನ ಸಂಚಾರ ಅಷ್ಟಾಗಿ ಇಲ್ಲದಿದ್ದರೂ, ಮೋರ್, ರಿಲಯನ್ಸ್ ಮಾರ್ಟ್, ಸ್ಪಾರ್ ಮಾರ್ಕೆಟ್ಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು.
ಮಂಗಳೂರು: ಅಗತ್ಯ ಸಾಮಗ್ರಿಗಳ ಖರೀದಿಗಾಗಿ ಸೂಪರ್ ಮಾರ್ಕೆಟ್ಗಳ ಮುಂದೆ ಸಾಲುಗಟ್ಟಿ ನಿಂತ ಜನ - Supermarkets open in Mangalore
ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ನೀಡಿದ್ದರಿಂದ ಮಂಗಳೂರಿನ ಸೂಪರ್ ಮಾರ್ಕೆಟ್ಗಳ ಮುಂದೆ ಜನ ಸರತಿ ಸಾಲಿನಲ್ಲಿ ನಿಂತಿದ್ದು ಕಂಡು ಬಂತು.
ಮಂಗಳೂರಿನಲ್ಲಿ ಸೂಪರ್ ಮಾರ್ಕೆಟ್ಗಳು ಓಪನ್
ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದ್ದು, ಹೀಗಾಗಿ, ಸೂಪರ್ ಮಾರ್ಕೆಟ್, ಮೀನು ಮಾರುಕಟ್ಟೆ, ಕೋಳಿ ಅಂಗಡಿಗಳಲ್ಲಿ ಜನ ಸರತಿ ಸಾಲಿನಲ್ಲಿ ನಿಂತಿದ್ದು ಕಂಡು ಬಂತು. ಪೊಲೀಸರು ಯಥಾ ಪ್ರಕಾರ ಕಟ್ಟು ನಿಟ್ಟಿನ ಬಂದೋಬಸ್ತ್ ಮಾಡುತ್ತಿದ್ದರೂ, ಎರಡನೇ ಹಂತದ ಲಾಕ್ ಡೌನ್ಗೆ ನಗರದ ಜನ ಅಷ್ಟೊಂದು ಸ್ಪಂದನೆ ನೀಡಿಲ್ಲ ಎಂದೇ ಹೇಳಬಹುದು.
ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ನೀಡಿದ್ದು, ಮಧ್ಯಾಹ್ನದ ಬಳಿಕ ಸಂಪೂರ್ಣ ಲಾಕ್ ಡೌನ್ ಮಾಡಲು ಆದೇಶ ನೀಡಲಾಗಿದೆ.