ಮಂಗಳೂರು (ದ.ಕ): ಅಪ್ರಾಪ್ತನೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ನೂರಾನಿ ಯತೀಂಖಾನ್ ಮಕ್ಕಳ ಕೇಂದ್ರದ ಮೇಲ್ವಿಚಾರಕನನ್ನು ಬಂಧಿಸಲಾಗಿದೆ.
ಈ ಕುರಿತು ಮಾತನಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮೂಲತಃ ಕೊಣಾಜೆಯ ಹಾಗೂ ಕುಂಪಲ ನೂರಾನಿ ಯತೀಂಖಾನ್ ಮಕ್ಕಳ ಕೇಂದ್ರದ ಮೇಲ್ವಿಚಾರಕ ಆಯ್ಯೂಬ್ (52) ಬಂಧಿತ ಆರೋಪಿಯಾಗಿದ್ದಾನೆ. ಬಾಲಕನ ತಂದೆ ಮೃತಪಟ್ಟಿದ್ದು, ತಾಯಿ ಮಾತ್ರ ಇದ್ದಾರೆ. ಕಳೆದ 4 ವರ್ಷಗಳಿಂದ ಕುಂಪಲದ ನೂರಾನಿ ಯತೀಂಖಾನ್ ಮಕ್ಕಳ ಕೇಂದ್ರದಲ್ಲಿದ್ದು, ವಿದ್ಯಾಭ್ಯಾಸ ಪಡೆಯುತ್ತಿದ್ದಾನೆ. ಸುಮಾರು 2 ತಿಂಗಳಿನಿಂದ ಈ ಬಾಲಕನಿಗೆ ಆರೋಪಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆರೋಪಿ ಇದೇ ರೀತಿ ಇನ್ನೂ 4 ಮಕ್ಕಳಿಗೆ ತೊಂದರೆ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ತನಿಖೆ ನಡಸಲಾಗುತ್ತಿದೆ. ಆರೋಪಿಯನ್ನು ನಿನ್ನೆ ರಾತ್ರಿ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೇ ಪ್ರಕರಣದ ಗಂಭೀರತೆ ಪರಿಗಣಿಸಿ ಮಂಗಳೂರು ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಹರಿರಾಂ ಶಂಕರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ತನಿಖೆ ನಡೆಸಲಾಗುತ್ತಿದೆ.
ಕಿರಾತಕನ ಕುರಿತು ಇನ್ನಷ್ಟು ವಿಚಾರಣೆ