ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಪ್ರತಿ ಗ್ರಾಮಗಳನ್ನು ಗಮನಿಸಿ ಕುಡಿಯುವ ನೀರಿನ ಪೂರೈಕೆ ಕಾರ್ಯಕೈಗೊಳ್ಳಬೇಕು. ಸಂಭವನೀಯ ಗ್ರಾಮಗಳನ್ನು ಗುರುತಿಸಿ ಟೆಂಡರ್ ಪ್ರಕ್ರಿಯೆ ನಡೆಸಿ, ನೀರು ಪೂರೈಕೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸೂಚಿಸಿದ್ದಾರೆ.
ಟೆಂಡರ್ ಮೂಲಕವೇ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ಸೂಚನೆ - ಟೆಂಡರ್ ಮೂಲಕವೇ ಕುಡಿಯುವ ನೀರಿನ ಪೂರೈಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಪ್ರತಿ ಗ್ರಾಮಗಳನ್ನು ಗಮನಿಸಿ ಕುಡಿಯುವ ನೀರಿನ ಪೂರೈಕೆ ಕಾರ್ಯಕೈಗೊಳ್ಳಬೇಕು. ಸಂಭವನೀಯ ಗ್ರಾಮಗಳನ್ನು ಗುರುತಿಸಿ ಟೆಂಡರ್ ಪ್ರಕ್ರಿಯೆ ನಡೆಸಿ, ನೀರು ಪೂರೈಕೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ಸೂಚಿಸಿದ್ದಾರೆ.
ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಟೆಂಡರ್ ಕರೆಯದೇ ಪ್ರಕ್ರಿಯೆ ನಡೆಸಬಾರದು. ಜಿಪಿಎಸ್ ಅಳವಡಿಸಿದ ಟ್ಯಾಂಕರ್ಗಳನ್ನೇ ನೀರು ಪೂರೈಕೆಗೆ ಬಳಸಬೇಕು. ಜನರಿಗೆ ಹಾಗೂ ಜಾನುವಾರುಗಳಿಗೆ ಸಾಕಷ್ಟು ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಮತ್ತು ಶೆಡ್ ನಿರ್ಮಾಣ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ತೀವ್ರ ಉಷ್ಣಾಂಶದ ಹೆಚ್ಚಳ ಹಾಗೂ ಬಿಸಿಗಾಳಿ ಪರಿಸ್ಥಿತಿ ನಿಭಾಯಿಸಲು ಸಂಬಂಧಪಟ್ಟ ಇಲಾಖೆಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಮಾನದಂಡಗಳನ್ನು ಅನುಸರಿಸಬೇಕು. ಅಷ್ಟೇ ಅಲ್ಲದೆ, ಅಂತಹ ಪ್ರದೇಶಗಳ ಮೇಲೆ ನಿಗಾವಹಿಸಬೇಕು ಎಂದರು.