ಕರ್ನಾಟಕ

karnataka

ETV Bharat / state

ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯಾಚರಣೆ ಪ್ರತಿಭಟನೆ: ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​

ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲು ಇಂದು ನೇರ ಕಾರ್ಯಾಚರಣೆಗೆ ಕರೆ ನೀಡಲಾಗಿದೆ.

police impose tight security
ಸುರತ್ಕಲ್ ಟೋಲ್ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​

By

Published : Oct 18, 2022, 9:11 AM IST

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಇಂದು ಹಮ್ಮಿಕೊಂಡಿರುವ ಟೋಲ್ ಗೇಟ್ ತೆರವು ಕಾರ್ಯಾಚರಣೆ ಹೋರಾಟದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಟೋಲ್ ಗೇಟ್‌ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ.

ಸುರತ್ಕಲ್ ಟೋಲ್ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​

ಟೋಲ್ ಗೇಟ್ ಬಳಿ 10 ಕೆಎಸ್ಆರ್​​ಪಿ ತುಕಡಿಗಳು, ಐದು ಸಿಆರ್​ಪಿಎಫ್​ ತುಕಡಿಗಳು ಸೇರಿದಂತೆ 450 ಪೊಲೀಸ್ ಕಾನ್ಸ್​​ಟೇಬಲ್ ಹಾಗೂ 40 ಮಂದಿ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಪ್ರತಿಭಟನೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಜೊತೆಗೆ ಹೋರಾಟ ಸಮಿತಿಯೂ ಪ್ರತಿಭಟನೆಗೆ ಅತ್ಯಧಿಕ ಸಂಖ್ಯೆಯಲ್ಲಿ ಜನವನ್ನು ಸೇರಿಸುವ ತಯಾರಿ ಮಾಡಿಕೊಂಡಿದೆ.

ಅ.18ರಂದು (ಇಂದು) ನಡೆಯುವ ಪ್ರತಿಭಟನೆಗೆ 5 ಸಾವಿರ ಜನ ಸೇರುವ ಸಾಧ್ಯತೆ ಇದೆ ಎಂದು ಹೋರಾಟ ಸಮಿತಿಯ ಮೂಲಗಳು ತಿಳಿಸಿದೆ. ಆದ್ದರಿಂದ ಮುನ್ನೆಚ್ಚರಿಕಾ ದೃಷ್ಟಿಯಿಂದ ಅಧಿಕ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಧರಣಿ.. ತಿಂಗಳೊಳಗೆ ತೆರವಿನ ಭರವಸೆ

ABOUT THE AUTHOR

...view details