ಮಂಗಳೂರು:ಕೊರೊನಾ ವೈರಸ್ ಕಾರಣಹೋಮ್ ಐಸೋಲೇಷನ್ನಲ್ಲಿದ್ದ ಸೋಂಕಿತನೋರ್ವ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಹಾರಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
COVID: ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು - ಮಂಗಳೂರು ಕೋವಿಡ್
ಕೊರೊನಾ ಸೋಂಕಿಗೊಳಗಾಗಿ ಹೋಮ್ ಐಸೋಲೇಷನ್ನಲ್ಲಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.
![COVID: ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Covid Suicide](https://etvbharatimages.akamaized.net/etvbharat/prod-images/768-512-11949546-60-11949546-1622311833448.jpg)
Covid Suicide
ಪಡೀಲ್ನಲ್ಲಿರುವ ಅಪಾರ್ಟ್ಮೆಂಟ್ ನಿವಾಸಿ ಸಮೀರ್(30), ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಮೃತ ಸಮೀರ್ಗೆ ಇತ್ತೀಚಿಗೆ ಕೋವಿಡ್ ಸೋಂಕು ಇರುವುದು ದೃಢಗೊಂಡಿತ್ತು. ಹೀಗಾಗಿ ಅವರು ಹೋಮ್ ಐಸೋಲೇಷನ್ನಲ್ಲಿದ್ದರು. ಆದರೆ ಯಾವುದೋ ಕಾರಣಕ್ಕೆ ಗುರುವಾರ ರಾತ್ರಿ ತಮ್ಮ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ: ಕೋವಿಡ್ನಿಂದ ಮೃತರ ಅವಲಂಬಿತರಿಗೂ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಚಿಂತನೆ!
ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.